Breaking News

ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ: ಜಗದೀಶ್ ಶೆಟ್ಟರ್

 

ಹುಬ್ಬಳ್ಳಿ: ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ಚುನಾವಣೆ ಕುರಿತು ಸೌಹಾರ್ದಯುತ ಮಾತುಕತೆ, ಚರ್ಚೆ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

  1.  

ಡಿ.ಕೆ. ಶಿವಕುಮಾರ್ ಅವರ ಜೊತೆ  ಔಪಚಾರಿಕ ಮಾತುಕತೆ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷ ಸಂಘಟನೆ ಹಾಗೂ ಚುನಾವಣಾ ತಯಾರಿ ಬಗ್ಗೆ ಹಲವು ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.

ಚುನಾವಣಾ ತಯಾರಿ ಬಗ್ಗೆ ಕೆಲ ಮಾತುಕತೆ ನಡೆಸಿದ್ದೇವೆ. ಅವರು ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ನಾನೂ ಕೆಲವು ಸಲಹೆಗಳನ್ನು ನೀಡಿದ್ದೇನೆ.  ಪಕ್ಷ ನನ್ನ ಜೊತೆಗಿದೆ ಅನ್ನುವ ಭರವಸೆಯನ್ನು ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿ ಅನ್ನೋ ಬಗ್ಗೆ ಯಾವುದೂ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com