Breaking News

ಚಿತ್ರದುರ್ಗ: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ, ಮೂವರು ಸಾವು

 

ಚಿತ್ರದುರ್ಗ: ಮೃತ ದೇಹವನ್ನು ಸಾಗಿಸುತ್ತಿದ್ದ ಅಂಬುಲೆನ್ಸ್ ವೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಂಬುಲೆನ್ಸ್ ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಗುರುವಾರ ನಡೆದಿದೆ.

ಅಂಬುಲೆನ್ಸ್ ನಲ್ಲಿದ್ದ ತಮಿಳುನಾಡಿನ ತಿರುನಲ್ವೇಲಿಯ ಕನಕಮಣಿ (72), ಆಕಾಶ್ (17) ಮತ್ತು ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

  1.  

ಆಂಬುಲೆನ್ಸ್ ಗುಜರಾತ್ ನಿಂದ ತಮಿಳುನಾಡಿನ ತಿರುನಲ್ವೇಲಿಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಅಂಬುಲೆನ್ಸ್ ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.  ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com