Breaking News

ಸೇತುವೆಯಿಂದ ಹೊಳೆಗೆ ಬಿದ್ದ ಕಾರು: ಒಬ್ಬನ ಸಾವು

 

ಉಪ್ಪಿನಂಗಡಿ: ಸೇತುವೆಯಿಂದ ಕಾರು ಹೊಳೆಗೆ ಬಿದ್ದು ಓರ್ವ ಮೃತಪಟ್ಟು,  ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಭಾನುವಾರ   ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ  ಸಂಭವಿಸಿದೆ.

ಮೃತಪಟ್ಟವರನ್ನು ತಮಿಳುನಾಡಿನ ಹೊಸೂರು ಮೂಲದ ಹರಿಪ್ರಸಾದ್ (50), ಗಾಯಗೊಂಡವರನ್ನು ಗೋಪಿ (48) ಎಂದು ಗುರುತಿಸಲಾಗಿದೆ. ಕಾರು ಹೊಸೂರಿನಿಂದ ಮಂಗಳೂರು ಕಡೆಗೆ ಬರುತ್ತಿತ್ತು ಎನ್ನಲಾಗುತ್ತಿದೆ.

  1.  

ಗಾಯಾಳುವಿಗೆ ನೆಲ್ಯಾಡಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳಗೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.

ಸ್ಥಳೀಯ ಪರಶುರಾಮ ಕ್ರೇನ್ ತಂಡ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ನೆಲ್ಯಾಡಿ ಹೊರಠಾಣಾ ಸಿಬ್ಬಂದಿ, ಉಪ್ಪಿನಂಗಡಿ ಠಾಣಾಧಿಕಾರಿ ಪರಿಶೀಲನೆ ನಡೆಸುತ್ತಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com