Breaking News

ಕಮಿಷನರೇಟ್ ವ್ಯಾಪ್ತಿ ಆ್ಯಂಟಿ ಕಮ್ಯೂನಲ್ ವಿಂಗ್ ಕೆಲಸ ಶುರು: ಕುಲದೀಪ್ ಕುಮಾರ್

 

ಮಂಗಳೂರು: ಕಮಿಷನರೇಟ್ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್‌ ಗಿರಿ ಪ್ರಕರಣಕ್ಕೆ ಬ್ರೇಕ್ ಹಾಕಲು ಆ್ಯಂಟಿ ಕಮ್ಯೂನಲ್ ವಿಂಗ್ ರಚನೆ ಮಾಡಲಾಗಿದೆ. ಸಿಸಿಬಿ ಎಸಿಪಿ ಪರಮೇಶ್ವರ ಹೆಗಡೆ ಅವರಿಗೆ ಇದರ ಉಸ್ತುವಾರಿ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದರು.

ನೈತಿಕ ಪೊಲೀಸ್‌ಗಿರಿ ಪ್ರಕರಣಗಳನ್ನು ಹಾಗೂ ಯಾವುದೇ ರೀತಿಯ ಕೋಮು ಗಲಭೆಗಳನ್ನು ತಡೆಗಟ್ಟುವ ಸಲುವಾಗಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ನಿಭಾಯಿಸುವುದು ಆ್ಯಂಟಿ ಕಮ್ಯುನಲ್ ವಿಂಗ್‌ನ ಉದ್ದೇಶದೆ ಎಂದು ತಿಳಿಸಿದರು.

ಜೂನ್ 6 ರಂದು ಮಂಗಳೂರಿನಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ಆ್ಯಂಟಿ ಕಮ್ಯೂನಲ್ ವಿಂಗ್ ರಚನೆ  ಬಗ್ಗೆ ಸೂಚನೆ ನೀಡಿದ್ದರು ಎಂದು ತಿಳಿಸಿದರು.

ನಗರ ಪ್ರದೇಶದಲ್ಲಿ ಅನೇಕ ವಿದ್ಯಾ ಸಂಸ್ಥೆಗಳದ್ದು ರಾಜ್ಯ, ಅಂತರ ರಾಜ್ಯ ಮತ್ತು ವಿದೇಶಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯು ಕೋಮು ಸೌಹಾರ್ದತೆ ವಿಚಾರದಲ್ಲಿ ಅತೀ ಸೂಕ್ಷ್ಮ ಪ್ರದೇಶ ಆಗಿದ್ದು, ಸಣ್ಣ ಪುಟ್ಟ ಮತೀಯ ಘಟನೆಗಳು ವಿಕೋಪಕ್ಕೆ ಹೋಗಿರುವ ಸನ್ನಿವೇಶಗಳು ಈ ಹಿಂದೆ ನಡೆದಿದೆ. ನಗರದಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ವರದಿ ಸಂದರ್ಭದಲ್ಲಿ ಹಾಗೂ ಕಾನೂನು ಸುವ್ಯವಸ್ಥೆಗೆ ತೊಂದರೆಯಾದ ಸಮಯದಲ್ಲಿ ಅಶಾಂತಿ ವಾತಾವರಣ ಉಂಟಾಗುವುದನ್ನು ತಡೆಯಲು ಈ ವಿಂಗ್ ಸಹಕಾರಿ ಎಂದರು.

  1.  

ನಗರದಲ್ಲಿ ಈ ಹಿಂದೆ ವರದಿ ಆಗಿರುವ ಕೋಮು ವಿಚಾರಕ್ಕೆ ಸಂಬಂಧಿಸಿದ ಎಲ್ಲ ಕೊಲೆ, ಕೊಲೆ ಪ್ರಯತ್ನ, ದೊಂಬಿ ಪ್ರಕರಣಗಳು ಸೇರಿದಂತೆ ನೈತಿಕ ಪೊಲೀಸ್‌ಗಿರಿ , ಗೋ ಕಳ್ಳತನ, ಅಕ್ರಮ ಗೋ-ಸಾಗಾಟ, ಗೋವಧೆ ಮುಂತಾದ ಪ್ರಕರಣಗಳನ್ನು ಪರಿಶೀಲಿಸಿ ಅವುಗಳಲ್ಲಿ ಆರೋಪಿಗಳಾಗಿ ಗುರುತಿಸಿಕೊಂಡವರ ಚಲನವಲನಗಳ ಬಗ್ಗೆ ಪ್ರತಿನಿತ್ಯ ನಿಗಾವಹಿಸಿ ಅವರ ವಿರುದ್ಧ ಭದ್ರತಾ ಕಾಯ್ದೆ ಅಡಿ ಮುಚ್ಚಳಿಕೆ ಪಡೆದುಕೊಳ್ಳುವುದರ ಬಗ್ಗೆ ಕರ್ತವ್ಯ ನಿರ್ವಹಿಸಲಾಗುತ್ತದೆ ಎಂದು ತಿಳಿಸಿದರು.

ಸಿಸಿಐ ಎಸಿಪಿ ಈ ತಂಡದ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸಲಿರುವ ಆ್ಯಂಟಿ ಕಮ್ಯುನಲ್ ವಿಂಗ್‌ನಲ್ಲಿ ಮಂಗಳೂರು ನಗರದ ವಿಶೇಷ ಘಟಕದ (ಸಿಎಸ್‌ಬಿ) ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ಸದಸ್ಯರಾಗಿರುತ್ತಾರೆ. ಇವರು ನಗರದಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಪ್ರಕರಣಗಳ ಕುರಿತು ಕಾಲಕಾಲಕ್ಕೆ ವಿಶ್ಲೇಷಣೆ ಮಾಡಿ ಆರೋಪಿಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಗಮನಹರಿಸಲಿದ್ದಾರೆ ಎಂದು ತಿಳಿಸಿದರು.

ಡಿಸಿಪಿಗಳಾದ ಅಂಶುಕುಮಾರ್, ದಿನೇಶ್ ಕುಮಾರ್, ಎಸಿಪಿ ಪರಮೇಶ್ವರ ಹೆಗಡೆ ಇದ್ದರು.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com