Breaking News

ನಿಗದಿತ ಸಮಯದಲ್ಲಿ ಕಾಮಗಾರಿ, ಯೋಜನೆ ಪೂರ್ತಿ ಮಾಡಿ: ಸಂಸದ ಹೆಗಡೆ

 

ಕಾರವಾರ: ಜಿಲ್ಲೆಗೆ  ಸರ್ಕಾರದಿಂದ ಜಾರಿ ಆಗಿರುವ ಕಾಮಗಾರಿ, ಯೋಜನೆಗಳನ್ನು ನಿಗದಿ ಪಡಿಸಿದ ಅವಧಿಯೊಳಗೆ ಮುಗಿಸಿ ಸಾರ್ವಜನಿಕರಿಗೆ ಅದರ ಉಪಯೋಗ ಆಗುವಂತೆ ಮಾಡಲು ಅಧಿಕಾರಿಗಳು ಜವಾಬ್ದಾರಿಯಿಂದ  ಕಾರ್ಯ ನಿರ್ವಹಿಸುವಂತೆ ಸಂಸದ ಅನಂತ ಕುಮಾರ ಹೆಗಡೆ ಹೇಳಿದರು.

ಕಾರವಾರ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಿದ್ದ ದಿಶಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿವಿಧ ಇಲಾಖೆಗಳ ಪ್ರಗತಿ ವರದಿ ಪರಿಶೀಲಿಸಿ  ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ತೋಟಗಾರಿಕೆ ಇಲಾಖೆ ಪ್ರಗತಿ ಪರಿಶೀಲಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಗಿ ಹೂ ಗಿಡಗಳನ್ನು ಬೆಳಯಲು ಸೂಚಿಸಿದರು  ಈ ಗಿಡದ ಹೂವಿನಲ್ಲಿ ಸುಮಾರು ಶೇ 34 ರಷ್ಟು  ಸಿಗಮಿಕ್ ಆ್ಯಸಿಡ್ ದೊರೆಯುತ್ತದೆ. ಇದು ಅತ್ಯಂತ ಪ್ರಮುಖ ಸಿಗಮಿಕ್ ಆ್ಯಸಿಡ್ ಆಗಿದ್ದು, ಜಗತ್ತಿನ ಕೆಲವು  ಔಷಧಿ ತಯಾರಿಸುವ ಕಂಪನಿಗಳು  ಈ ಸಿಗಮಿಕ್ ಆ್ಯಸಿಡ್ ಉಪಯೋಗಿಸುತ್ತಾರೆ. ಉತ್ತರ ಕನ್ನಡ ಜಿಲ್ಲೆಯ ಅರಣ್ಯದಲ್ಲಿ ಬೆಳೆಯಲು ಪ್ರಯತ್ನಿಸೋಣ. ಇದನ್ನು ಜಿಲ್ಲಾ ಪಂಚಾಯಿತಿ, ಅರಣ್ಯ ಇಲಾಖೆ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ  ಇದನ್ನು ಕಾರ್ಯರೂಪಕ್ಕೆ ತರಲು ಸೂಚನೆ ನೀಡಿದರು.

  1.  

ಅರೋಗ್ಯ ಇಲಾಖೆಯಿಂದ ಮಾಹಿತಿ ಪಡೆದು ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ  ಕಾರ್ಡ್ ಗಳ ವಿತರಣೆಗೆ ಒಟ್ಟು 13 ಲಕ್ಷ ಗುರಿ ನಿಗದಿ ಆಗಿದ್ದು ಅದರಲ್ಲಿ ಇಲಾಖೆಯಿಂದ 4.25 ಲಕ್ಷ ಕಾರ್ಡುಗಳನ್ನು ವಿತರಿಸಿದ್ದೀರಿ. ಉಳಿದ ಕಾರ್ಡ್ ಗಳನ್ನು ತ್ವರಿತಗತಿಯಲ್ಲಿ ವಿತರಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಕಾರ್ಡ್ ಗಳನ್ನು ವಿತರಿಸಲು ಅಧಿಕಾರಿಗಳು ಒಂದು ರೂಪರೇಷೆಯನ್ನು ಸಿದ್ಧ ಪಡಿಸಿ ಅದರ ವರದಿಯನ್ನು ಸಲ್ಲಿಸಬೇಕು ನಿಗದಿ ಪಡಿಸಿದ ದಿನಾಂಕದ ಒಳಗೆ ಎಲ್ಲ ಕಾರ್ಡ್ ಗಳನ್ನು ವಿತರಿಸಲು ಈ ಕೂಡಲೇ ಕ್ರಮ ವಹಿಸಬೇಕು ಎಂದರು.

ಕಾರವಾರ ಹಾಗೂ ಸಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ  ಶಾಲೆ ಬಿಟ್ಟ ಮಕ್ಕಳ ಕುರಿತು ಚರ್ಚಿಸಿದರು. ಭಟ್ಕಳ ಮತ್ತು ಸಿದ್ದಾಪುರ ಈ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇದ್ದು, ಈ ಬಗ್ಗೆ ಕ್ರಮ ವಹಿಸಲು ಸೂಚಿಸಿದರು. ವಿದ್ಯಾರ್ಥಿಗಳಿಗೆ ಅವಶ್ಯಕತೆ ಇರುವ ವಾತಾವರಣವನ್ನು ಶಾಲೆಗಳಲ್ಲಿ ಸೃಷ್ಟಿಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊಳವೆ ಬಾವಿಗಳಲ್ಲಿ ಬ್ಯಾಕ್ಟೀರಿಯಾದ ಮಾಲಿನ್ಯ ಅಂಶ ಕಂಡು ಬರುತ್ತಿದ್ದು, ಆರೋಗ್ಯ ಇಲಾಖೆ ಸಹಾಯದಿಂದ ಅಂತಹ ನೀರನ್ನು ಪರೀಕ್ಷೆಗೆ ಒಳಪಡಿಸಿ ಆರೋಗ್ಯ ಇಲಾಖೆಯಿಂದ ಪ್ರಮಾಣ ಪತ್ರ ಪಡೆದು ಅಂತಹ ಕೊಳವೆ ಬಾವಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. 1,246 ಗ್ರಾಮಗಳಲ್ಲಿ ಕೇವಲ 325 ಗ್ರಾಮಗಳ ಎಫ್ ಟಿಕೆ ಪರೀಕ್ಷೆ ಮಾಡಿದ್ದು, ಉಳಿದ ಗ್ರಾಮಗಳಲ್ಲಿನ ಕೊಳವೆ ಬಾವಿಗಳನ್ನು ಈ ಕೂಡಲೇ ಪರೀಕ್ಷೆಗೆ ಒಳಪಡಿಸಿ ಅಧಿಕಾರಿಗಳಿಗೆ ಸೂಚಿಸಿದರು.

ಕಾರವಾರ- ಅಂಕೋಲಾ ಶಾಸಕ ಸತೀಶ ಸೈಲ್, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೆಕರ್,  ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ ಖಂದೂ, ಕರ್ನಾಟಕ ವಿಕೇಂದ್ರಿಕರಣ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ  ಪ್ರಮೋದ್ ಹೆಗಡೆ ಹಾಗೂ ಜಿಲ್ಲಾ ಮಟ್ಟದ ಮತ್ತು ತಾಲೂಕ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com