Breaking News

ಪುತ್ತೂರು: ಹೆರಿಗೆ ವೇಳೆ ಮಹಿಳೆ ಸಾವನ್ನಪ್ಪಿದ್ದ ಬೆನ್ನಲ್ಲೆ ಮಗು ಸಾವು

 

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯಾ (28) ಜೂನ್ 20 ರಂದು ಹೆರಿಗೆ ವೇಳೆ ರಕ್ತಸ್ರಾವದಿಂದ ಸಾವನ್ನಪ್ಪಿರುವ ಬೆನ್ನಲ್ಲೆ ಹಸುಕೂಸು ಮೃತಪಟ್ಟಿದೆ.

ಭವ್ಯಾ ಅವರು ತಮ್ಮ  3 ನೇ ಹೆರಿಗೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.  ಮಂಗಳವಾರ ರಾತ್ರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಹೆರಿಗೆ ಆಗುವಾಗಲೇ ರಕ್ತಸ್ರಾವದಿಂದ ಸಾವನ್ನಪ್ಪಿದ್ದರು. ಅವರ ಸಾವಿನ ನಂತರ ಮಗುವನ್ನು ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ಇಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಗುರುವಾರ ಮಗು ಮೃತಪಟ್ಟಿದೆ ಎನ್ನಲಾಗಿದೆ.

  1.  

ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಲಿಖಿತ ದೂರು ಸಲ್ಲಿಸಿರುವ ಪತಿ ಬಾಲಕೃಷ್ಣ ಗೌಡ ಅವರು, ಜೂನ್ 20 ರಂದು   ಮಂಗಳವಾರ ತನ್ನ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡು ನೋವಿನಿಂದ ಒದ್ದಾಡುತ್ತಿದ್ದರೂ, ಆಕೆಯ ದೈಹಿಕ ಆರೋಗ್ಯ ಸ್ಥಿತಿ ಬಗ್ಗೆಯಾಗಲಿ, ಸಹಜ ಹೆರಿಗೆ ಸಾಧ್ಯತೆ ಬಗ್ಗೆಯಾಗಲಿ ಯಾವುದೇ ಪರೀಕ್ಷೆಗಳನ್ನು ನಡೆಸದೆ ನೋವಿನಲ್ಲೇ ನರಳುವಂತೆ ಮಾಡಿದ್ದರು. ಆಕೆ ಅತೀವ ನೋವಿನೊಂದಿಗೆ ಒದ್ದಾಡುತ್ತಿದ್ದರೂ ವೈದ್ಯರನ್ನು  ಕರೆಸುವ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಯಾವುದೇ ಪ್ರಯತ್ನ ನಡೆಸಲಿಲ್ಲ ಹಾಗೂ ತಜ್ಞ ವೈದ್ಯರನ್ನು ಕರೆಸುವ ಅಥವಾ ಅವರ ಸಲಹೆ ಕೇಳುವ  ಯಾವುದೇ ಪ್ರಯತ್ನವನ್ನು ಮಾಡದೆ ನಿರ್ಲಕ್ಷ್ಯದಿಂದ ಹೆರಿಗೆ ಮಾಡಲಾಗಿದೆ.  ಬಲವಂತದ ಹೆರಿಗೆ ಆಗುವಂತೆ ಮಾಡಿರುವುದರಿಂದ ಪತ್ನಿ ಹಾಗೂ ಹಸುಕೂಸು ಸಾವನ್ನಪ್ಪಲು ಆಸ್ಪತ್ರೆಯ ಸಿಬ್ಬಂದಿ ಕಾರಣ ಎಂದು ದೂರು ನೀಡಿದ್ದಾರೆ.

‌ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ದೂರು ಸ್ವೀಕರಿಸಿರುವ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com