Breaking News

ಕರಾವಳಿ ಸೇರಿದಂತೆ 6 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್: ಭಾರಿ ಮಳೆ ಸಾಧ್ಯತೆ

 

ಬೆಂಗಳೂರು: ರಾಜ್ಯದ ಹಲವೆಡೆ ಗುರುವಾರ ವ್ಯಾಪಕ ರೀತಿಯಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

  1.  

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿಯ ಬಹುತೇಕ ಕಡೆಯ ಹಾಗೂ ದಕ್ಷಿಣ ಒಳನಾಡಿನ ಕೆಲವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೆಡೆಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ  45  ರಿಂದ 55 ಕಿಲೋ ಮೀಟರ್‌ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಾಗೃತೆ ವಹಿಸಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com