Breaking News

ಜೆ.ಆರ್.ಲೋಬೊ ಚುನಾವಣಾ ತಕರಾರು ಅರ್ಜಿ: ಹೈಕೋರ್ಟ್ ವಜಾ

 

ಮಂಗಳೂರು: 2018 ರ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಇವಿಎಂ ದುರ್ಬಳಕೆ ಹಾಗೂ ಬಿಜೆಪಿ ಅಭ್ಯರ್ಥಿ ಪತ್ನಿ ಧರ್ಮದ ಆಧಾರದಲ್ಲಿ ಹಿಂದುತ್ವ ಹೆಸರಿನಲ್ಲಿ ಮತ ಯಾಚಿಸಿದ್ದಾರೆ. ಆದ್ದರಿಂದ ವಿಜೇತ ಅಭ್ಯರ್ಥಿ ಆಯ್ಕೆಯನ್ನು ರದ್ದು ಪಡಿಸಿ ಪರಾಜಿತ ಅಭ್ಯರ್ಥಿಯ ಆಯ್ಕೆ ಘೋಷಿಸುವಂತೆ ಕೋರಿದ್ದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಜೆ.ಆರ್. ಲೋಬೊ ಅವರು ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ವಿರುದ್ಧ ಸೋಲು ಅನುಭವಿಸಿದ್ದರು. ಫಲಿತಾಂಶದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರು ತಮ್ಮ ವಕೀಲ ರವೀಂದ್ರನಾಥ್ ಕಾಮತ್ ಅವರ ಮೂಲಕ ರಾಜ್ಯ ಹೈಕೋರ್ಟ್‌ ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

  1.  

ಅರ್ಜಿಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಇವಿಎಂ ದುರ್ಬಳಕೆ ಮಾಡಲಾಗಿದೆ. ಅಲ್ಲದೆ ವೇದವ್ಯಾಸ್ ಕಾಮತ್ ಅವರ ಪತ್ನಿ ಹಿಂದುತ್ವ ಹೆಸರಿನಲ್ಲಿ ಮತ ಯಾಚನೆ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕರಿಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂಬ ಆರೋಪವನ್ನು ಅರ್ಜಿಯಲ್ಲಿ ಮಾಡಿದ್ದರು. ಈ ಪ್ರಕರಣದಲ್ಲಿ ವೇದವ್ಯಾಸ್ ಕಾಮತ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ಹಿಂದುತ್ವ ಎನ್ನುವುದು ಧರ್ಮ ಸೂಚಕವಲ್ಲ. ಅದು ಜೀವನ ಪದ್ಧತಿ ಎಂಬುದನ್ನು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಇವಿಎಂ ದುರ್ಬಳಕೆ ಪ್ರಶ್ನೆಯೇ ಇಲ್ಲ. ಇವಿಎಂ ದುರ್ಬಳಕೆ ಅಸಾಧ್ಯ ಎಂಬುದನ್ನು ಕೂಡ ಸುಪ್ರೀಂ ಕೋರ್ಟ್ ಹೇಳಿರುವ ಕುರಿತ ತೀರ್ಪನ್ನು ಉಲ್ಲೇಖಿಸಿ ಅವರು ವಾದ ಮಂಡಿಸಿದ್ದರು.

ಐದು ವರ್ಷ ಕಾಲ ಈ ಕುರಿತು ವಾದ- ವಿವಾದ ನಡೆಸಲಾಗಿದೆ. ಈ ಬಗ್ಗೆ ಎರಡು ತಂಡಗಳ ವಾದ ವಿವಾದ ಆಲಿಸಿದ ಹೈಕೋರ್ಟ್‌ ಏಕಸದಸ್ಯ ನ್ಯಾಯ ಪೀಠ ದ ನ್ಯಾಯಮೂರ್ತಿ ದೇವದಾಸ್ ಅವರು, ಅರ್ಜಿದಾರರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂಬುದನ್ನು ಮನಗಂಡು 2023 ರಲ್ಲಿ ಹೊಸ ಚುನಾವಣೆ ನಡೆದು ಮತ್ತೆ ಆಯ್ಕೆ ಆಗಿರುವುದರಿಂದ ಲೋಬೊ ಸಲ್ಲಿಸಿದ್ದ ಅರ್ಜಿ ನಿರರ್ಥಕ ಎಂದು ಜುಲೈ 6 ರಂದು ಅರ್ಜಿ ವಜಾಗೊಳಿಸಿದ್ದಾರೆ.

During the assembly elections held in May 2018, EVM misused in Mangalore South constituency and BJP candidate’s wife sought votes in the name of Hindutva on the basis of religion. Therefore, the State High Court has dismissed the election dispute petition seeking to cancel the election of the winning candidate and declare the election of the defeated candidate.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com