Breaking News

ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿಗೆ ಸ್ಪೀಕರ್‌ ಯು.ಟಿ. ಖಾದರ್‌ ಭಾಜನ

 

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್ ಅವರಿಗೆ ಒಡಿಶಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಗೋಪಾಲ್ ಗೌಡ ಅಧ್ಯಕ್ಷತೆಯ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆಯಿಂದ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಭಾನುವಾರ ನವದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

  1.  

ನ್ಯಾ. ಗೋಪಾಲ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಚತ್ತೀಸ್ ಗಢ ರಾಜ್ಯಪಾಲ ಬಿಸ್ವ ಭೂಷಣ್ ಹರಿಚರಣ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಅವರ ಆತ್ಮಕತೆ ‘ಬ್ಯಾಟಲ್ ನಾಟ್ ಓವರ್’ ಕೃತಿಯ ಇಂಗ್ಲಿಷ್ ಅನುವಾದ ಅದೇ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ದೇಶದ ಹಿರಿಯ ನ್ಯಾಯಾಧೀಶರು ಹಾಗೂ ಅಧಿಕಾರಿಗಳು ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್  ಪದಾಧಿಕಾರಿಗಳು, ಸದಸ್ಯರು ಹಾಗೂ ಪೋಷಕರಾಗಿದ್ದು, ಈ ಸಂಸ್ಥೆಯಿಂದ ನೀಡಲಾಗುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಈ ಹಿಂದೆ ಹಲವು ಖ್ಯಾತ ನ್ಯಾಯಾಧೀಶರು, ಕಲಾವಿದರು, ಉದ್ಯಮಿಗಳು, ವಿಜ್ಞಾನಿಗಳು ಮತ್ತಿತರ ಹಿರಿಯ ಸಾಧಕರಿಗೆ ಹಾಗೂ ಬುದ್ಧಿಜೀವಿಗಳಿಗೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Assembly Speaker U. T. Khader is a retired Chief Justice of Odisha High Court and a retired Justice of the Supreme Court. He has been honored with the Great Son of India Award by the Indian Conference of Intellectuals chaired by Gopal Gowda, a release said.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com