Breaking News

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್‌: ಎಸ್ಪಿ ಎಚ್ಚರಿಕೆ

 

ಉಡುಪಿ: ರಾಜ್ಯ ಸರಕಾರದ ಉಚಿತ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್‌ಗಳ ಮೂಲಕ ಸೈಬರ್‌ ಕಳ್ಳರು ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವ ಇದ್ದು ಜನಸಾಮಾನ್ಯರು ಎಚ್ಚರ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಹಾಕೆ ಮಚ್ಚಿಂದ್ರ ತಿಳಿಸಿದ್ದಾರೆ.

ಯೋಜನೆಗಳಿಗೆ ಸಂಬಂಧಿಸಿ ಸರಕಾರ ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್‌ ಬಿಡುಗಡೆ ಮಾಡಿಲ್ಲ. ನಕಲಿ ಆ್ಯಪ್‌ ಗಳನ್ನು ಯಾರೂ ಕೂಡ ಮೊಬೈಲ್‌ನಲ್ಲಿ ಡೌನ್ಲೋಡ್‌ ಮಾಡಿಕೊಳ್ಳಬಾರದು. ಸೈಬರ್‌ ಕಳ್ಳರು ಮೆಸೇಜ್‌ ಮೂಲಕ ಹಾಗೂ ವಾಟ್ಸ್‌ಆ್ಯಪ್‌ನಲ್ಲಿ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ಗಳನ್ನು ಬಳಸದಂತೆ ಎಚ್ಚರಿಸಿದ್ದಾರೆ.

  1.  

ಅಂತಹ ಲಿಂಕ್‌ ಕ್ಲಿಕ್‌ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆ ಆಗಬಹುದು. ಯಾರಾದರೂ ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದೀರಿ ಎಂದು ಹೇಳಿ ವೈಯಕ್ತಿಕ ವಿವರಗಳನ್ನು ಬಯಸಿದಲ್ಲಿ ನೀಡಬಾರದು. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಬೇಕು ಎಂದು ತಿಳಿಸಿದ್ದಾರೆ.

Udupi District Superintendent of Police Akshay Haque Machindra has said that there is a possibility that cyber thieves are misusing the personal information of the public by using fake apps in the name of free schemes of the state government such as Grilahakshmi and Grihajyoti.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com