Breaking News

ಐದು ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರದ ಆದೇಶ

 

ಬೆಂಗಳೂರು: ರಾಜ್ಯ ಸರಕಾರ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಎಸ್. ಅವರನ್ನು ಬಿಎಂಆರ್‍ಡಿಎ ಆಯುಕ್ತೆ ಆಗಿ, ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸಿಇಒ ಎಂ.ಎಸ್.ದಿವಾಕರ್ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

  1.  

ಗದಗ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಬಿ.ಸುಶೀಲಾ ಅವರನ್ನು ಯಾದಗಿರಿ ಜಿಲ್ಲಾಧಿಕಾರಿ, ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರನ್ನು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ಭಾರತಿ ಅವರನ್ನು ರಾಜ್ಯ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಸಿದೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com