Breaking News

ಗೃಹಲಕ್ಷ್ಮೀ ಯೋಜನೆಗೆ ಹೆಸರು ನೋಂದಣಿ ಮಾಡಿಸಿ: ಡಿಸಿ ಮುಲ್ಲೈ

 

ಮಂಗಳೂರು: ಗೃಹಲಕ್ಷ್ಮಿ ಯೋಜನೆ ಅಡಿ ಫಲಾನುಭವಿ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲ ಅರ್ಹರು ಯೋಜನೆ ಅಡಿ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತಿಳಿಸಿದ್ದಾರೆ.

ಈಗಾಗಲೇ ತಿಳಿಸಿದಂತೆ ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಈ ಯೋಜನೆ ಫಲಾನುಭವಿ ಆಗುತ್ತಾರೆ. ಆದರೆ, ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರ ಆಗಿರಬಾರದು. ಫಲಾನುಭವಿಯು ನೋಂದಣಿಯನ್ನು 3 ವಿಧಾನದಿಂದ ಮಾಡಿಕೊಳ್ಳಬಹುದು.  ಮೊದಲನೇಯದಾಗಿ ರೇಷನ್ ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು ಎಸ್‍ಎಂಎಸ್ ಮೂಲಕ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

ಗ್ರಾಮಾಂತರ ಪ್ರದೇಶದ ಜನರು ಸಮೀಪದ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ನಗರ ಪ್ರದೇಶದಲ್ಲಿ ಕರ್ನಾಟಕ-ಒನ್ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು ಕೇಂದ್ರ ಆಗಿರುತ್ತದೆ. ಪರ್ಯಾಯವಾಗಿ ಪ್ರಜಾಪ್ರತಿನಿಧಿ (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೋಂದಾಯಿಸಿ ಕೊಳ್ಳಬಹುದು ಎಂದು ತಿಳಿಸಿದ್ದಾರೆ.

  1.  

ಪ್ರತಿ ಫಲಾನುಭವಿ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಿ ಅಥವಾ 8147500500 ನಂಬರ್‌  ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ- ಒನ್/ಬಾಪೂಜಿ ಕೇಂದ್ರ/ಕರ್ನಾಟಕ-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್, ಸಂಖ್ಯೆ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ (ಆಧಾರ್ ನಂಬರ್ ಜೋಡಣೆ ಆಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಬ್ಯಾಂಕ್ ಖಾತೆಯ ಪಾಸ್ ಬುಕ್  ಮಾಹಿತಿ ಅಗತ್ಯವಿದೆ. ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನೆ ಆಗುತ್ತದೆ. ಈಗಾಗಲೇ ಆಧಾರ್ ಜೋಡಣೆ ಆಗಿರುವ ಫಲಾನುಭವಿಯ ಖಾತೆಗೆ ತಿಂಗಳಿಗೆ ರೂ.2000 ಡಿ.ಬಿ.ಟಿ. ಮೂಲಕ ಜಮೆ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆ ನೀಡಬಹುದು ಎಂದು ತಿಳಿಸಿದ್ದಾರೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com