Breaking News

ಕಾರ್ಯಕ್ರಮ ಆಧಾರಿತ ಪ್ರವಾಸೋದ್ಯಮಕ್ಕೆ ನೀಲನಕ್ಷೆ: ಡಿಸಿ ಮುಲ್ಲೈ

 

ಮಂಗಳೂರು: ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶಗಳಿದ್ದು, ಕಾರ್ಯಕ್ರಮ ಆಧಾರಿತ ಪ್ರವಾಸೋದ್ಯಮಕ್ಕೆ ನೀಲನಕ್ಷೆ ರಚನೆ ಮಾಡಲಾಗುತ್ತದೆ. ಜನರು ಗ್ರಾಮಾಂತರ ಪ್ರದೇಶಗಳಿಂದ ಜಿಲ್ಲಾಧಿಕಾರಿ ಕಚೇರಿ ಅಲೆಯುವುದನ್ನು ತಪ್ಪಿಸಲು ಜಿಲ್ಲಾಧಿಕಾರಿ ತಂಡವು ವಾರಕೊಮ್ಮೆ ತಾಲ್ಲೂಕು ಭೇಟಿ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದರು.

ಮಂಗಳೂರು ಪ್ರೆಸ್‌ ಕ್ಲಬ್‌ ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಬೀಚ್‌ ಗಳು ಇವೆ. ಪಿಲಿಕುಳದ ಉದ್ಯಾನ ಒಳಗೊಂಡತೆ ಎಲ್ಲಾ ಪ್ರವಾಸಿ ಕೇಂದ್ರಗಳನ್ನು ಕ್ರೋಢೀಕರಿಸಿ ವಿಭಿನ್ನ ಕಾರ್ಯಕ್ರಮಗಳ ವೇಳಾ ಪಟ್ಟಿಯನ್ನು ರಚನೆ ಮಾಡಲಾಗುತ್ತದೆ. ಪ್ರವಾಸಿಗರನ್ನು ಆಕರ್ಷಿಸಲು ಹಾಗೂ ಪ್ರವಾಸಿಗರು ಇಲ್ಲಿ ಬಂದು ಉಳಿದು ಇಲ್ಲಿನ ಸೊಬಗನ್ನು ಸವಿಯುವ ನಿಟ್ಟಿನಲ್ಲಿ ಕಾರ್ಯ ಯೋಜನೆ ನಡೆಸಲಾಗುತ್ತದೆ. ಜಿಲ್ಲಾಡಳಿತ ಪ್ರವಾಸೋದ್ಯಮ ಇಲಾಖೆ ಸಹಕಾರದಲ್ಲಿ ಪೋರ್ಟಲ್ ಮೂಲಕ ಪ್ರಚಾರ ಮಾಡುವ ಕಾರ್ಯವನ್ನು ಮಾಡಲಿದೆ. ತುಋತು ನಗರದ ಪ್ರಮುಖ ಬೀಚ್‌ ಗಳು, ಪ್ರವಾಸಿ ಕೇಂದ್ರಗಳ ಸೂಚನಾ ಫಲಕಗಳನ್ನು ಅಳವಡಿಸುವ ಕಾರ್ಯ ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸರಕಾರಿ ಬಸ್‌ ಗಳ ಸಂಚಾರಕ್ಕೆ ಇರುವ ಸಮಸ್ಯೆ, ಎಲೆಕ್ಟ್ರಿಕ್ ಆಟೋ ರಿಕ್ಷಾಗಳು ಸೇರಿದಂತೆ ಸಾರಿಗೆ  ಇಲಾಖೆಗೆ  ಸಂಬಂಧಿಸಿತ ಸಮಸ್ಯೆಗಳ ಬಗ್ಗೆ ಶೀಘ್ರವೇ ಸಾರಿಗೆ ಪ್ರಾಧಿಕಾರದ ಸಭೆ ನಡೆಸಲಾಗುತ್ತದೆ. ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿನ ಹೊಂಡ ಗುಂಡಿಗಳು, ಒಳಚರಂಡಿ ಅವ್ಯವಸ್ಥೆ ಮೊದಲಾದ ಬಗ್ಗೆ ಎನ್ಎಚ್ ಅಧಿಕಾರಿಗಳು ಹಾಗೂ ಪಾಲಿಕೆ ಅಧಿಕಾರಿಗಳ ಜತೆ ಜಂಟಿಯಾಗಿ ಪರಿಶೀಲನೆ ನಡೆಸಲಾಗುತ್ತದೆ ಎಂದರು.

ಮಂಗಳೂರು ತಾಲೂಕು ಸೇರಿದಂತೆ ಜಿಲ್ಲೆಯ ಗ್ರಾಮಾಂತರ ತಾಲೂಕುಗಳಲ್ಲಿನ ಜಟಿಲ ಸಮಸ್ಯೆಯಾಗಿರುವ ಕಂದಾಯ ಅರಣ್ಯ ಭೂಮಿಯ ವರ್ಗೀಕರಣಕ್ಕೆ ಸಂಬಂಧಿಸಿ ಸರ್ವೆ ಕೇವಲ ಜಿಲ್ಲೆಯನ್ನು ಸೀಮಿತವಾಗಿ ನಡೆಸಲು ಸಾಧ್ಯತೆ ಬಗ್ಗೆ ಪರಿಶೀಲಿಸಲಾಗುವುದು. ಇದೇ ವೇಳೆ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಜಿಪಿಎಸ್ ಆಧಾರದಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿಯನ್ನು

  1.  

ಗುರುತಿಸುವಿಕೆಯನ್ನು ವಿಶೇಷ ಅಧ್ಯಯನ ಹಾಗೂ ವಿಶೇಷ ತಂಡದ ಮೂಲಕ ನಡೆಸಲು ಪ್ರಯತ್ನಿಸಲಾಗುವುದು ಎಂದು ಮುಲ್ಲೈ ಮುಗಿಲನ್ ತಿಳಿಸಿದರು.

ಗ್ರಾಮೀಣ ಭಾಗಗಳಲ್ಲಿ ತಾಲೂಕು ಆಸ್ಪತ್ರೆ, ತಾಲೂಕು ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ ನಿಗದಿತ ದಿನಗಳಲ್ಲಿ ಸಾರ್ವಜನಿಕರಿಗೆ ಸಂಬಂಧಪಟ್ಟವರು ಲಭ್ಯ ಇರುವಂತೆ ಹಾಗೂ ಈ ಮಾಹಿತಿ ಕಚೇರಿಗಳಲ್ಲಿಯೂ ಲಭ್ಯವಾಗುವಂತೆ ಕ್ರಮ ವಹಿಸಲಾಗುವುದು ಎಂದರು.

ಮೂಲ್ಕಿ, ಉಳ್ಳಾಲ, ಕಡಬ, ಮೂಡುಬಿದಿರೆ ಹೊಸ ತಾಲೂಕುಗಳಲ್ಲಿ ಅಗತ್ಯ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಕಂದಾಯ ಇಲಾಖೆ ಮಾಹಿತಿ ಪಡೆದಿದೆ. ಶೀಘ್ರದಲ್ಲೇ ತಾಲೂಕು ಕೇಂದ್ರಗಳಲ್ಲಿ ಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದರು.

ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್ ರೈ ಇದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಪ್ರಾಸ್ತಾವಿಕ ಮಾತನಾಡಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ  ಜಿತೇಂದ್ರ ಕುಂದೇಶ್ವರ ವಂದಿಸಿದರು.

There are many opportunities for tourism in the district and a blueprint will be created for program based tourism. Collector Mullai Mugilan said in an interaction program organized by District Working Journalists’ Association at Mangalore Press Club that to prevent people from wandering to the District Collector’s office from rural areas, the District Collector’s team will visit the taluk once a week.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com