Breaking News

ಸ್ವಂತ ಕಾರು ಇರುವವರಿಗಿಲ್ಲ ಬಿಪಿಎಲ್‌ ಕಾರ್ಡ್:‌ ಸಚಿವ ಮುನಿಯಪ್ಪ

 

ಬೆಂಗಳೂರು: ಸ್ವಂತ ಕಾರು ಹೊಂದಿರುವವರಿಗೆ ಬಿಪಿಎಲ್‌ ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ, ಹಳದಿ ಬಣ್ಣದ ನಾಮಫಲಕದ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ ಎಂದರು.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದ ಜತೆ ಪಿಯೂಶ್ ಗೋಯಲ್ ಅವರೊಂದಿಗೆ ಮಾತನಾಡಿದ್ದು ಅಕ್ಕಿ ನೀಡುವುದಿಲ್ಲ ಎಂದು ಹೇಳಿದ್ದು, ಈ ವಿಚಾರದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆ ನಮ್ಮ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದೆ. ಈ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿಗೆ 35 ಕೆ.ಜಿ ಪಡಿತರ ಧಾನ್ಯ ಮತ್ತು ಆದ್ಯತಾ ಪಡಿತರ ಚೀಟಿಯ ಫಲಾನುಭವಿಗಳಿಗೆ 5 ಕೆ.ಜಿ ಪಡಿತರ ಧಾನ್ಯದ ಜತೆಗೆ ಹೆಚ್ಚುವರಿಯಾಗಿ ತಲಾ 5 ಕೆ.ಜಿ ಪಡಿತರ ಧಾನ್ಯ ಸೇರಿ ಒಟ್ಟು ತಲಾ 10 ಕೆ.ಜಿ. ಪಡಿತರ ನೀಡುವುದು ಗ್ಯಾರಂಟಿ ಯೋಜನೆ ಉದ್ದೇಶವಾಗಿದೆ ಎಂದರು.

  1.  

ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದ ಒಂದೇ ತಿಂಗಳೊಳಗೆ 1 ಕೋಟಿಗೂ ಅಧಿಕ ಪಡಿತರ ಕುಟುಂಬಗಳ ಫಲಾನುಭವಿಗಳಿಗೆ 566 ಕೋಟಿ ರೂ. ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅಧಿಕಾರಿಗಳು ಇದ್ದರು.

Food, Civil Supplies and Consumer Affairs Minister KH Muniappa said in a press conference at Vidhansouda on Friday that there is a consideration of not giving BPL card to those who own their own cars.

He said that the BPL card of the family with a white board car will be cancelled, while the BPL card of the car owner with a yellow name plate is being considered.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com