Breaking News

ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆ ಪರಿಹಾರಕ್ಕೆ ಸಚಿವ ವೆಂಕಟೇಶ್ ಭರವಸೆ

 

ಬೆಂಗಳೂರು: ರಾಜ್ಯದ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರನ್ನು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್ (ಕೆಪಿಎಫ್‍ಬಿಎ)ನ ಪ್ರತಿನಿಧಿಗಳು ಭೇಟಿ ಮಾಡಿ, ರಾಜ್ಯದ ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆಗಳ ಕುರಿತು ಮನವರಿಕೆ ಮಾಡಿದ್ದು, ಸಚಿವರು ಇದಕ್ಕೆ ಪೂರಕವಾಗಿ ಸ್ಪಂಧಿಸುವ ಜತೆಗೆ ಸಮಸ್ಯೆ ಪರಿಹಾರಕ್ಕೆ ಭರವಸೆಯನ್ನು ನೀಡಿದರು.

ಕೆಪಿಎಫ್‍ಬಿಎ ಅಧ್ಯಕ್ಷ ಡಾ. ಸುಶಾಂತ್ ರೈ ನೇತೃತ್ವದ ನಿಯೋಗದಿಂದ ಕುಕ್ಕುಟೋದ್ಯಮ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು. ವಿದ್ಯುತ್ ದರ ಹೆಚ್ಚಳದಿಂದ ಕುಕ್ಕುಟೋದ್ಯಮಕ್ಕೆ ಹೊರೆಯಾಗಿದ್ದು, ಉತ್ಪಾದನಾ ವೆಚ್ಚ ಹೆಚ್ಚುತ್ತಿದೆ. ಅಷ್ಟೇ ಅಲ್ಲದೆ ಕೆಲವು ಕೋಳಿ ಘಟಕಗಳು ಬೇರೆ ರಾಜ್ಯಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆಗಳಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಯಿತು.

ಡಾ. ಸುಶಾಂತ್ ರೈ ಅವರು ಸಂಘದ ಚಟುವಟಿಕೆಗಳು, ಅದರ ಅತ್ಯಾಧುನಿಕ ರೋಗನಿರ್ಣಯ ಪ್ರಯೋಗಾಲಯ ಮತ್ತು ತರಬೇತಿ ಕೇಂದ್ರ ಮತ್ತು ಕೋಳಿ ವಲಯವನ್ನು ಉತ್ತೇಜಿಸಲು ಸರಕಾರ ಮತ್ತು ಸದಸ್ಯರೊಂದಿಗೆ ಹೊಂದಿರುವ ಸಂಪರ್ಕದ ಬಗ್ಗೆ ತಿಳಿಸಿದರು.

  1.  

ಕೆಪಿಎಫ್‍ಬಿಎ ಮಾಜಿ ಅಧ್ಯಕ್ಷ ಕೆ.ಎಸ್. ಅಶೋಕ್ ಕುಮಾರ್ ಅವರು ಕರ್ನಾಟಕದಲ್ಲಿ ಕೋಳಿ ಸಾಕಾಣಿಕೆ ಕ್ಷೇತ್ರವು ಬೆಳೆದಿರುವ ಹಾಗೂ ಇನ್ನೂ ಹೆಚ್ಚಿನ ಬೆಳವಣಿಗೆಗೆ ಬೇಕಾದ ಸಾಮಾರ್ಥ್ಯವಿದ್ದು ಅದಕ್ಕೆ ಸಚಿವಾಲಯದ ಬೆಂಬಲ ಕೋರಿದರು. ಕೋಳಿ ಸಾಕಾಣಿಕೆ ಕ್ಷೇತ್ರದಲ್ಲಿ  ಕೆಪಿಎಫ್‍ಬಿಎ ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿ, ಕೋಳಿ ಸಾಕಾಣೆದಾರರಿಗೆ ಪ್ರಯೋಜನವಾಗುವ ನಿರ್ಧಾರಕ್ಕೆ ಬೆಂಬಲಿಸುವುದಾಗಿ ಸಚಿವರು ತಿಳಿಸಿದರು.

ಕೆಪಿಎಫ್‍ಬಿಎ ನಿಯೋಗ ಸಚಿವ ಕೆ.ವೆಂಕಟೇಶ್ ಅವರನ್ನು ಸನ್ಮಾನಿಸಿತು. ಎಸ್.ಆರ್.ಆಗ್ರೋ ಫಾರ್ಮ್ಸ್‍ನ ರಾಜೇಶ್ ರೆಡ್ಡಿ ಮತ್ತು ಕೆಪಿಎಫ್‍ಬಿಎ ಕಾರ್ಯನಿರ್ವಾಹಕ ಕಾರ್ಯದರ್ಶಿ ಇನಾಯತ್ ಉಲ್ಲಾ ಖಾನ್ ಇದ್ದರು.

State Animal Husbandry Minister K. Venkatesh was met by the representatives of Karnataka Poultry Farmers and Breeders Association (KPFBA) and convinced about the problems in the poultry sector of the state, and the minister promised to respond accordingly and solve the problem.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com