Breaking News

ಹುಬ್ಬಳ್ಳಿ- ಧಾರವಾಡ ಪೊಲೀಸ್‌ ಆಯುಕ್ತೆಯಾಗಿ ರೇಣುಕಾ ನೇಮಕ

 

ಧಾರವಾಡ: ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.

ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಪ್ರಭಾರ ಪೊಲೀಸ್‌ ಕಮಿಷನರ್‌ ಆಗಿ ನೇಮಕವಾಗಿದ್ದರು. ಅವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದ್ದು, ಅವರ ಬದಲಿಗೆ ಪೊಲೀಸ್ ಆಯುಕ್ತರನ್ನಾಗಿ ರೇಣುಕಾ ಅವರನ್ನು ನೇಮಕ ಮಾಡಲಾಗಿದೆ.

  1.  

2011 ನೇ ಬ್ಯಾಚ್  ಐಪಿಎಸ್ ಅಧಿಕಾರಿಯಾಗಿರುವ ರೇಣುಕಾ ಅವರು ಈ ಹಿಂದೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇದರ ಜತೆಗೆ ಕೊಪ್ಪಳ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಆಗಿ ಅವರು ಕೆಲಸ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿರಸಿಯಲ್ಲಿ  ಕೆಲ ಸಮಯ ಅವರು ಡಿವೈಎಸ್‌ ಪಿ ಆಗಿ ಕರ್ತವ್ಯ ನಿರ್ವಹಿಸಿದ್ದರು.

Hubballi – The state government on Wednesday issued an order appointing IPS officer Renuka Sukumar as the Dharwad Police Commissioner.

IPS officer Santosh Babu was appointed as the Commissioner of Police in charge. He was transferred elsewhere and Renuka was appointed as Commissioner of Police in his place.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com