Breaking News

ಆಡಳಿತದಲ್ಲಿ ಜಿಲ್ಲಾಡಳಿತದ ಅನಗತ್ಯ ಹಸ್ತಕ್ಷೇಪ: ಬಿಜೆಪಿ ಶಾಸಕರು ಗರಂ

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಆಡಳಿತ ವ್ಯವಸ್ಥೆಯಲ್ಲಿ ಕಾರಣವಿಲ್ಲದೆ ಅನಗತ್ಯ ಹಸ್ತಕ್ಷೇಪ ಮಾಡುತ್ತಿರುವುದರಿಂದ ಶಾಸಕರ ಹಕ್ಕು ಚ್ಯುತಿಯಾಗುತ್ತಿದೆ ಎಂದು ಜಿಲ್ಲೆಯ ಬಿಜೆಪಿ ಶಾಸಕರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಮ ಪಂಚಾಯಿತಿ ರಾಜೀವ್‌ ಗಾಂಧಿ ಸೇವಾ ಕೇಂದ್ರ ಹಾಗೂ ಪಂಚಾಯಿತಿ  ಕಚೇರಿ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಮತ್ತು ಗ್ರಾಮ ಪಂಚಾಯಿತಿ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ. ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಸಂಕೀರ್ಣ ಕಟ್ಟಡ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲೂ ಶಿಷ್ಠಾಚಾರ ಉಲ್ಲಂಘನೆಯಾಗಿದೆ ಎಂದು ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಆರೋಪ ಮಾಡಿದರು.

ಜಿಲ್ಲಾಡಳಿತದ ಇಂತಹ ಕ್ರಮಗಳು ಖಂಡನೀಯ. ಮುಂದೆ ಇಂತಹ ಅಚಾತುರ್ಯ ನಡೆಯದಂತೆ ಕ್ರಮ ಕೈಗೊಳ್ಳಬೇಕು. ಅಮಾನತು ಮಾಡಿರುವ ಅಧಿಕಾರಿಗಳನ್ನು ಮೂರು ದಿನದೊಳಗೆ ಸೇವೆಗೆ ಮರು ಸೇರ್ಪಡೆಗೊಳಿಸದಿದ್ದಲ್ಲಿ ಅ.14 ರಂದು ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಿದ್ದೇವೆ ಎಂದು ಮಾಜಿ ಸಚಿವಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

  1.  

ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಪ್ರತಾಪ ಸಿಂಹ ನಾಯಕ್ ಇದ್ದರು.

BJP MLAs of the district alleged in a press conference on Thursday that the Dakshina Kannada district administration is interfering unnecessarily in the administrative system and the rights of MLAs are being violated.

Taluk Panchayat EO and Gram Panchayat PDO have been suspended for violation of etiquette in the invitation letter of Rajiv Gandhi Seva Kendra and Panchayat Office inauguration program of Iruvailu Gram Panchayat of Mudubidire assembly constituency. He alleged that there was a violation of etiquette in the invitation letter of the clean complex building inauguration in Irvattur village panchayat of Bantwal constituency and the program was postponed.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com