Breaking News

ಪ್ರವಾಸಿಗರಿಗೆ ಸೌಲಭ್ಯ ಒದಗಿಸುವ ಯೋಜನೆ ಅನುಷ್ಠಾನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 

ಉಡುಪಿ: ಜಿಲ್ಲೆಯಲ್ಲಿ 48 ಪ್ರವಾಸಿ ಸ್ಥಳಗಳನ್ನು ಪ್ರವಾಸಿ ತಾಣ ಎಂದು ಗುರುತಿಸಲಾಗಿದೆ. ಇದರ ಜತೆಗೆ ಇನ್ನೂ 32 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಹೊಸದಾಗಿ ಸೇರ್ಪಡೆ ಮಾಡಿ ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

‌ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು  ಮಾತನಾಡಿ, ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಬೇಕಾದ ಯೋಜನೆಗಳ ಕುರಿತು ಅಧಿಕಾರಿಗಳ ಜತೆಗೆ ಚರ್ಚಿಸಿದರು.

ದೇಶ-ವಿದೇಶಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಗರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಜಿಲ್ಲೆಯ ಪ್ರಕೃತಿ ಸೌಂದರ್ಯ, ಧಾರ್ಮಿಕ ಕೇಂದ್ರಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿವೆ. ಇಲ್ಲಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಆಗಮಿಸುವ ಪ್ರವಾಸಿಗರಿಗೆ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ, ವಾಹನಗಳ ಪಾರ್ಕಿಂಗ್ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.

  1.  

ಪ್ರಸಾದ್ ಯೋಜನೆ ಅಡಿಯಲ್ಲಿ ವಿವಿಧ ಧಾರ್ಮಿಕ ಹೆರಿಟೇಜ್ ಸ್ಥಳಗಳಲ್ಲಿ ಪ್ರವಾಸಿಗರಿಗೆ ಸೌಲಭ್ಯ ಒದಗಿಸುವ ಯೋಜನೆ ಅನುಷ್ಠಾನಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯಿತಿ ಸಿಇಒ ಪ್ರಸನ್ನ ಎಚ್, ಎಸ್ಪಿ ಅಕ್ಷಯ್ ಎಂ ಹಾಕೆ, ಹೆಚ್ಚುವರಿ  ಜಿಲ್ಲಾಧಿಕಾರಿ ಮಮತಾದೇವಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಇದ್ದರು.

48 tourist places in Udupi district have been identified as tourist destinations. Besides this, district in-charge minister Lakshmi Hebbalkar said that 32 more places should be newly added as tourist spots and awareness should be created among the people.

He presided over the progress review meeting of the tourism and fisheries departments at the office hall of the District Collector on Monday and discussed with the officials the plans for the development of tourism in the district.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com