Breaking News

ಜಿಲ್ಲಾ ಮಟ್ಟದ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಜಿ.ಪಂ ಸಿಇಒ ಈಶ್ವರ ಕಾಂದೂ ಚಾಲನೆ

 

ಕಾರವಾರ: ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ ಅವರು ಗುರುವಾರ ಕಾರವಾರ ತಾಲ್ಲೂಕಿನ ಶಿರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಚಾಲನೆ ನೀಡಿದರು.

ಅವರು ಈ ವೇಳೆ ಮಾತನಾಡಿ, ಶಾಲಾ ವಿದ್ಯಾರ್ಥಿಗಳ ಅಪೌಷ್ಠಿಕತೆ ನಿವಾರಣೆಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರದ ಪಿಎಂ ಪೋಷಣ್ ಮತ್ತು ಕ್ಷೀರಭಾಗ್ಯ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಈಗಾಗಲೇ ಮೊಟ್ಟೆ ತಿನ್ನುವ ವಿದ್ಯಾರ್ಥಿಗಳಿಗೆ ಮೊಟ್ಟೆ ಹಾಗೂ ಮೊಟ್ಟೆ ತಿನ್ನದೆ ಇರುವ ವಿದ್ಯಾರ್ಥಿಗಳಿಗೆ ಹಾಲು ವಿತರಿಸಲಾಗುತ್ತಿದೆ. ಈ ಮೊಟ್ಟೆ ಮತ್ತು ಹಾಲು ವಿತರಣೆಯನ್ನು 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂಬ ಪಾಲಕರ ಹಾಗೂ ಸಾರ್ವಜನಿಕರ ಬೇಡಿಕೆಯಂತೆ ರಾಜ್ಯ ಸರಕಾರ ಪ್ರಸಕ್ತ ಸಾಲಿನಿಂದ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಿಸುವಂತೆ ನಿರ್ದೇಶನ ನೀಡಿ ಆದೇಶ ಹೊರಡಿಸಿದೆ ಎಂದರು.

ಸರಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ಅಗಸ್ಟ್18 ರಿಂದ ಮೊಟ್ಟೆ ವಿತರಿಸುವಂತೆ ತಿಳಿಸಲಾಗಿದೆ. ಇದರ ಪೂರ್ವಭಾವಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ತಾಲ್ಲೂಕಿನ ಶಿರವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

  1.  

ಡಿಡಿಪಿಐ, ಬಿಇಒ, ತಾಲ್ಲೂಕು ಪಂಚಾಯಿತಿ, ಇಒ, ಶಾಲಾ ಶಿಕ್ಷಕರು, ಗ್ರಾಮ ಪಂಚಾಯಿತಿ ಪಿಡಿಒ, ಸಿಬ್ಬಂದಿ ಇದ್ದರು.

Zilla Panchayat CEO Ishwar Kandoo launched the district level program of distributing eggs in the afternoon to the 9th and 10th class students studying in government and aided schools at Karnataka Public School under Shirwada Gram Panchayat of Karwar taluk on Thursday.

He said on this occasion that PM Poshan and Ksheerabhagya schemes of state and central government have been implemented to eliminate malnutrition among school students. In this regard, milk is being distributed to the students of classes 1 to 8 of all government and aided schools of the state in the mid-afternoon heat to the students who are already eating eggs and to the students who are not eating eggs. According to the demand of the parents and the public that the distribution of eggs and milk should be extended to the students of class 9 and 10, the state government has issued a directive to distribute eggs to the students of classes 9 and 10 in the afternoon.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com