Breaking News

ಕರಾವಳಿ ಜಿಲ್ಲೆಗಳು ಮತ್ತೆ ಅಬ್ಬರಿಸಲಿರುವ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

 

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಶುಕ್ರವಾರದಿಂದ ಮಳೆಯ ಆರ್ಭಟ ಶುರುವಾಗಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣದಿಂದ ಕೂಡಿದ್ದು ಮಳೆ ಆಗು ಸಾಧ್ಯತೆ ಹೆಚ್ಚಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳ ಹಲವೆಡೆ ಶನಿವಾರ  ಮತ್ತು ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರದಲ್ಲಿ ಅಲೆಗಳ ಅಬ್ಬರ  ಹೆಚ್ಚಾಗುವ ಸಾಧ್ಯತೆ ಇದ್ದು, 0.4 ಮೀಟರ್‌ ನಿಂದ 1 ಮೀಟರ್‌ ವರೆಗೂ ಅಲೆಗಳು ಅಬ್ಬರಿಸಲಿದೆ. ಅಷ್ಟೇ ಅಲ್ಲದೇ ಗುಡುಗು, ಮಿಂಚಿನೊಂದಿಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಎರಡು ದಿನಗಳವರೆಗೂ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  1.  

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ  ಎರಡು ವಾರಗಳಿಂದ ಮಳೆ ಕಡಿಮೆಯಾಗಿದ್ದು, ಬಿರು ಬಿಸಿಲಿನ  ತಾಪಮಾನ ಏರಿಕೆಯಿಂದ ನದಿಗಳ ನೀರು ಇಳಿಕೆ ಆಗಿವೆ.

The coastal district of the state has started receiving heavy rainfall since Friday. According to the Meteorological Department, there is a possibility of heavy rain in the coming days. Cloudy weather from morning and chances of rain are high.

The Meteorological Department has predicted that many parts of the coastal districts of the state are likely to experience thundershowers on Saturday and Sunday.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com