Breaking News

ಸುಳ್ಯ: ಲಂಚ ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ, ಬಂಧನ

 

ಸುಳ್ಯ: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸುಳ್ಯದ ಸಂಪಾಜೆ- ಅರಂತೋಡಿನ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಹೇಬ್ ಮುಲ್ಲಾ ಎಂಬುವವರನ್ನು ಬಂಧನ ಮಾಡಿದ್ದಾರೆ.

  1.  

ಅರಂತೋಡಿನ ಹರಿಪ್ರಸಾದ್ ಎಂಬುವವರು ಹಕ್ಕು ಖುಲಾಸೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಡತ ವಿಲೇವಾರಿಗಾಗಿ ಲೆಕ್ಕಾಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಹೇಬ್ ಮುಲ್ಲಾ 5000 ರೂಪಾಯಿ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೋಲಿಸರ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ಕ ಎಸ್ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಚೆಲುವರಾಜ್, ಕಲಾವತಿ ಮತ್ತು ಪೊಲೀಸ್ ನಿರೀಕ್ಷಕ ಅಮಾನುಲ್ಲಾ ಮತ್ತು ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com