Breaking News

ಸುಳ್ಳು ದಾಖಲೆ ಸೃಷ್ಟಿಸಿ ಎಸ್ಸಿ ಪ್ರಮಾಣ ಪತ್ರ ಪಡೆದು ಗ್ರಾ.ಪಂ ಅಧ್ಯಕ್ಷೆ ಆಗಿದ್ದ ಮಹಿಳೆಗೆ 7 ವರ್ಷ ಕಾರಾಗೃಹ ಶಿಕ್ಷೆ, ದಂಡ

 

ಹಾವೇರಿ: ಶಿಗ್ಗಾವಿ ತಾಲೂಕು ವನಹಳ್ಳಿ ಗ್ರಾಮದ ಲಕ್ಷ್ಮೀ ಮಾರುತಿ ಕಬ್ಬೇರ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಗ್ರಾಮ ಪಂಚಾಯಿತಿ  ಅಧ್ಯಕ್ಷ ಸ್ಥಾನ ಮತ್ತು ಸದಸ್ಯ ಸ್ಥಾನ ಅನುಭವಿಸಿದ್ದರು. ಅವರಿಗೆ ಹಾವೇರಿ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 19 ಸಾವಿರ ರೂಪಾಯಿಗಳ ದಂಡದ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಅವರು ಈ ಆದೇಶ ಹೊರಡಿಸಿದ್ದು, ಸರಕಾರದ ಪರ ಸರ್ಕಾರಿ ಅಭಿಯೋಜಕಿ ಸರೋಜಾ ಜಿ. ಕೂಲಗಿಮಠ ಅವರು ವಾದ ಮಂಡನೆ ಮಾಡಿದ್ದರು.

ಲಕ್ಷ್ಮೀ ಕಬ್ಬೇರ ಅವರು ಹಿಂದೂ ಗಂಗಾಮತ (ಪ್ರವರ್ಗ-1)ಕ್ಕೆ ಸೇರಿದ್ದರು. ಆದರೆ ಸುಳ್ಳು ವ್ಯಾಸಂಗ ಪ್ರಮಾಣಪತ್ರ ಹಾಗೂ ಸುಳ್ಳು ಘೋಷಣಾ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ಸೃಷ್ಟಿ ಮಾಡಿ ಶಿಗ್ಗಾವಿ ತಹಶೀಲ್ದಾರ್‌ ಕಚೇರಿಗೆ ಸಲ್ಲಿಸಿದ್ದರು. ಹಿಂದೂ ಗಂಟಿಚೋರ್ಸ್ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿದ್ದರು. ಹನುಮರಹಳ್ಳಿ ಗ್ರಾಮ ಪಂಚಾಯಿತಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿ, ನಂತರ ಎಸ್.ಸಿ ಸ್ಥಾನಕ್ಕೆ ಮೀಸಲಾಗಿದ್ದ ಗ್ರಾಮ ಪಂಚಾಯಿತಿ  ಅಧ್ಯಕ್ಷೆ ಕೂಡ ಆಗಿದ್ದರು.

  1.  

ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ದಾವಣಗೆರೆ ಡಿಸಿಆರ್‌ಒ ಪೊಲೀಸ್ ಇನ್‌ಸ್ಪೆಕ್ಟರ್‌ ಟಿ.ಜಿ. ಶ್ರೀಧರ ಶಾಸ್ತ್ರೀ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Lakshmi Maruti Kabbera of Vanahalli village of Shiggavi taluk submitted a false caste certificate and enjoyed the post of village panchayat president and member. The 1st Additional District and Sessions Court, Haveri sentenced him to seven years imprisonment and a fine of Rs 19,000.

Judge G.L. Lakshminarayan has issued this order, the public prosecutor for the government Saroja G. Koolagi Math had argued.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com