Breaking News

ಕಸ ಎಸೆಯುವವರ ವಿರುದ್ಧ ದಂಡದ ಅಸ್ತ್ರಕ್ಕೆ ಮಹಾನಗರ ಪಾಲಿಕೆ ಸಿದ್ಧತೆ

 

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ಬೇಕಾಬಿಟ್ಟಿ ಕಸ ಎಸೆಯುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾನಗರ ಪಾಲಿಕೆ ಕಸ ಎಸೆಯುವವರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು  ಆರಂಭಿಸಿದೆ.

ಬುಧವಾರ ನಗರದ ಮಣ್ಣಗುಡ್ಡ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯದ ರಾಶಿ ಹಾಕಿರುವವರ ಮೇಲೆ ಘನತ್ಯಾಜ್ಯ ನಿರ್ವಹಣೆ ಉಪ ವಿಧಿ ಉಲ್ಲಂಘನೆ ಪ್ರಕರಣದ ಅಡಿ ದಂಡ ವಿಧಿಸಿ ರೂಪಾಯಿ 4000 ವಸೂಲಿ ಮಾಡಲಾಗಿದೆ. ಇನ್ನೂ ಮುಂದೆ ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಚ್ಚರ ವಹಿಸುವಂತೆ ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ.

  1.  

ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಸ್ಪಾಟ್‌ಗಳು ನಿರ್ಮಾಣ ಆಗಿದ್ದು, ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಛತೆಗೆ ಧಕ್ಕೆ ಉಂಟಾಗುತ್ತಿದೆ. ಈ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸೌಂದರ್ಯಕ್ಕೆ ಹಾಗೂ ಸ್ವಚ್ಛತೆಗೆ ಧಕ್ಕೆ ತರುವವರ ವಿರುದ್ಧ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಂಡ ವಿಧಿಸುವ ಪ್ರಕ್ರಿಯೆ ನಡೆಸುತ್ತಿರುವುದಾಗಿ ಪಾಲಿಕೆ ಆಯುಕ್ತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Taking a serious view of littering in public places and roadsides, the Metropolitan Corporation has started the process of imposing fines on litterers.

A fine of Rs 4000 has been levied against those who have piled waste in public places in the city’s Mannagudda area on Wednesday under the Solid Waste Management Bye-law violation case. Further, legal action will be taken against those concerned if it is found that garbage is being thrown in a public place in this manner. The Metropolitan Corporation has warned to be careful about this.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com