Breaking News

ಕಕ್ಕಿಲ್ಲಾಯ ಪ್ರತಿಷ್ಠಾನದ ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ವಿರೋಧ

 

ಮಂಗಳೂರು: ನವದೆಹಲಿ ವಿವಿ ನಿವೃತ್ತ ಪ್ರಾಧ್ಯಾಪಕ ಡಾ. ಶಂಸುಲ್‌ ಇಸ್ಲಾಂ ಅವರ ಉಪನ್ಯಾಸವನ್ನು ವಿರೋಧಿಸಿ ಮಂಗಳೂರು ವಿವಿ  ಕಾಲೇಜಿಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶನಿವಾರ ನಡೆಯಿತು. ಈ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದ ಪರಿಣಾ ಕೆಲ ಹೊತ್ತು ವಾಗ್ವಾದ ನಡೆಯಿತು.

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 – ಜಂಟಿ ಬಲದಾನಗಳು , ಜಂಟಿ ವಾರಸುದಾರಿಕೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಈ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜನೆ ಮಾಡುವುದರ ವಿರುದ್ಧ ಪ್ರತಿಭಟನೆ ನಡೆಸಿದರು.

  1.  

ನವದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಡಾ. ಶಂಸುಲ್‌ ಇಸ್ಲಾಂ ಅವರು ಉಪನ್ಯಾಸ ನೀಡಲಿರುವುದನ್ನು ಎಬಿವಿಪಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿತು. ವಿರೋಧದ ನಡುವೆಯೂ ಬಿ. ವಿ. ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡುತ್ತಿದ್ದು, ಯಾವುದೇ ಕಾರಣಕ್ಕೂ ನಡೆಸುವುದು ಬೇಡ ಎಂದು ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಆರ್ ಎಸ್ ಎಸ್ ನ ತೀವ್ರ ವಿರೋಧಿ ಆಗಿರುವ ಡಾ. ಶಂಸುಲ್ ಇಸ್ಲಾಂ ಅವರು ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂಬುದು ಆಕ್ರೋಷಕ್ಕೆ ಕಾರಣವಾಗಿದೆ. ಸಂಘ ಪರಿವಾರದ ತೀವ್ರ ವಿರೋಧಿ ಆಗಿರುವ ಡಾ. ಶಂಸುಲ್ ಇಸ್ಮಾಂ ಉಪನ್ಯಾಸಕ್ಕೆ ಕರೆಸಲಾಗಿದೆ. ಪ್ರಧಾನಿ ಮೋದಿ ವಿರೋಧಿ ಆಗಿರುವ ಡಾ.  ಶಂಸುಲ್ ಇಸ್ಮಾಂ ಅವರು ಉಪನ್ಯಾಸ ಮಾಡಬಾರದು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com