Breaking News

ಕಿತ್ತೂರು ರಾಣಿ ಚೆನ್ನಮ್ಮ ಕೊಡುಗೆ ಅಪಾರ: ಡಿ.ಸಿ. ಡಾ. ಕೆ ವಿದ್ಯಾಕುಮಾರಿ

 

ಉಡುಪಿ: ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ವತಿಯಿಂದ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು  ಮಾತನಾಡಿದರು.

ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಮುನ್ನುಡಿ ಬರೆದಿದ್ದು, ಚೆನ್ನಮ್ಮ ಅವರ ಹೋರಾಟದ ಮನೋಭಾವವು ಇಂದಿನ ಮಹಿಳೆಯರಿಗೆ ಮಾದರಿ ಆಗಿದೆ. ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವುದರೊಂದಿಗೆ ಚೆನ್ನಮ್ಮರ ಶೌರ್ಯ ಸಾಹಸ, ಸಾಧನೆಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದರು.

  1.  

ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ನಳಿನಾದೇವಿ ಉಪನ್ಯಾಸ ನೀಡಿ ಮಾತನಾಡಿ, ನಾಡಿನ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತನು ಮನವನ್ನು ಅರ್ಪಿಸಿದವರು ಕಿತ್ತೂರು ರಾಣಿ ಚೆನ್ನಮ್ಮ. ಚಿಕ್ಕಂದಿನಿಂದಲೇ ಶಸ್ತ್ರಾಭ್ಯಾಸ, ರಾಮಾಯಣ ಮಹಾಭಾರತ ಪುರಾಣಗಳ ಅಧ್ಯಯನ ಹಾಗೂ ಧಾರ್ಮಿಕ ವಿಚಾರಗಳು ಚೆನ್ನಮ್ಮನ ಕೆಚ್ಚೆದೆಯ ವೀರ ವನಿತೆಯನ್ನಾಗಿ ಮಾಡಿಸಿತು ಎಂದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ, ಕನ್ನಡ ಸಾಹಿತ್ಯ ಪರಿಷತ್  ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಯದರ್ಶಿ ನರಸಿಂಹ ಮೂರ್ತಿ, ಜಂಗಮ ಮಠದ ಗಿರೀಶ್  ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಶಶಿಧರ್ ನಿರೂಪಿಸಿ, ಜಂಗಮ ಮಠದ ಡಾ. ನಿರಂಜನ ವಂದಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com