Breaking News

ಅಂತರ ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ ಆತ್ಮಹತ್ಯೆ

 

ಬೆಂಗಳೂರು: ಅಂತರ ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆಯಲ್ಲಿ ನಡೆದಿದೆ.

ಅರಿಶಿನಕುಂಟೆಯ ಆದರ್ಶನಗರದ ಮನೆಯಲ್ಲಿ ಅಂತರ ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ(25) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಸ್ನೇಹಿತರ ಜತೆಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ ಅವರು, ತಂದೆ ಹಾಗೂ ತಮ್ಮ ಮನೆಯಲ್ಲಿ ಇರುವಾಗಲೇ ಕೊಣೆಯಲ್ಲಿ ನೇಣು ಹಾಕಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದವರು,  5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸವಿದ್ದರು. ಅಂತರ ರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬಡ್ಡಿಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮಿ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರದಲ್ಲಿ ಮನನೊಂದು ನೇಣು ಹಾಕಿಕೊಂಡಿರಬಹುದು ಎಂದು ಮೃತ ಯುವತಿ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

  1.  

An international women’s kabaddi athlete committed suicide at Arishinakunte in Nelamangala, Bengaluru rural district.

International Kabaddi athlete Dhanalakshmi (25) committed suicide by hanging herself at her house in Adarshnagar, Arishinakunte.

Two days ago, Dhanalakshmi, who had come to Mysore with her friends to celebrate Dussehra, hanged herself in her father’s house.

K. Thimmalapura of Channarayapatna taluk of Hassan district, had been living on rent in Adarshnagar, Arishinakunte, Nelamangala for 5 years. Police said that Dhanalakshmi, who had participated in kabaddi three times at the international level, was employed in a private company in Kadugodi.

A case has been registered in Nelamangala Town Police Station regarding this. In the complaint, the parents of the deceased young woman said that she might have hung her mind over some issue.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com