Breaking News

ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಸಿಎಂ ಸಿದ್ದರಾಮಯ್ಯ

 

ಉಡುಪಿ: ಬಂಟರ ಅಭಿವೃದ್ದಿ ನಿಗಮ ಮಾಡುವ ಭರವಸೆಯನ್ನು ಕರಾವಳಿ ಕರ್ನಾಟಕದ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇದನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ಬಂಟರ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಂಟರು ಪ್ರಾಚೀನ ಕಾಲದಿಂ ದಲೂ ಕರಾವಳಿ ಪ್ರದೇಶದಲ್ಲಿ ತಮ್ಮ ಜೀವನ ನಡೆಸಿದವರು. ಇದನ್ನು ಇತಿಹಾಸದಲ್ಲಿ ಕೂಡ ನೋಡಲು ಸಾಧ್ಯ. ಇತ್ತೀಚಿನ ವರ್ಷಗಳಲ್ಲಿ ಜಗತ್ತಿನ ಅನೇಕ ಪ್ರದೇಶಗಳಿಗೆ ನಾನಾ ಕಾರಣಗಳಿಂದಾಗಿ ಬಂಟರು ವಲಸೆ ಹೋಗಿದ್ದಾರೆ. ವಿಶ್ವದ ಅನೇಕ ಭಾಗಗಳಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟರು ಸಾಹಸ ಪ್ರವೃತ್ತಿ ಉಳ್ಳವರು. ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆ ಹೊಂದಿರುವ ಸಮಾಜ. ರಾಜ್ಯಕ್ಕೆ ಅವರ ಕೊಡುಗೆ ಅಪಾರ. ಬಂಟ ಜನಾಂಗದವರು ಶಿಕ್ಷಣ, ಕ್ರೀಡೆ, ಸಿನಿಮಾ, ಉದ್ಯಮ, ಹೋಟೆಲ್ ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಯಾವುದೇ ಊರಲ್ಲಿ ಇದ್ದರು ಕರಾವಳಿ ಸಂಸ್ಕೃತಿ ಮತ್ತು ಪರಂಪರೆ ಮರೆತಿಲ್ಲ ಎಂದರು.

  1.  

ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತಾನಾಡಿ, ಬಂಟ ಸಮುದಾಯದವರು ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ಕಲೆ, ಕ್ರೀಡೆ, ಸಾಹಿತ್ಯ, ಸ್ವಾತಂತ್ರ್ಯ ಹೋರಾಟ ಎಲ್ಲ ಕ್ಷೇತ್ರದಲ್ಲಿಯೂ ಸಾಹಸ ಮೆರೆದವರು. ಕರ್ನಾಟಕ ಮಾತ್ರವಲ್ಲ ದೇಶ ಮತ್ತು ವಿಶ್ವಕ್ಕೆ ಕೊಡುಗೆ ನೀಡಿದವರು. ವಿಶ್ವದ ಬಂಟರೆಲ್ಲರನ್ನೂ ಒಗ್ಗೂಡಿಸುವ ಕೆಲಸ ಉಡುಪಿ ಮಂಗಳೂರು ಬಂಟ ಸಮಾಜದಿಂದ ಆಗಿರುವುದು ಶ್ಲಾಘನೀಯ ಎಂದರು.

ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಮಾತನಾಡಿ, ಬಂಟರ ಪ್ರೀತಿ ವಿಶ್ವಾಸ ನನ್ನನ್ನು ಇಲ್ಲಿ ಕರೆತಂದಿದೆ. ಎಲ್ಲಾ ವರ್ಗದವರನ್ನೂ ಪ್ರೀತಿ ವಿಶ್ವಾಸದಿಂದ ಸಮಾನತೆಯಿಂದ ಕಾಣುವ ಸಮಾಜ ಬಂಟರದ್ದು. ಸಮಾಜದಲ್ಲಿ ನೇತೃತ್ವ ಹೊಂದಿರುವ ಪರಂಪರೆ ಇರುವ ಸಮಾಜ ಇದನ್ನು ಯುವ ಜನಾಂಗ ಮುಂದೆ ಕೊಂಡು ಹೋಗಬೇಕು ಎಂದರು.

ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಶಾಸಕ ಯಶ್ ಪಾಲ್ ಸುವರ್ಣ, ಅಶೋಕ್ ಕುಮಾರ್, ದಾನಿಗಳಾದ ಕನ್ಯಾನ ಸದಾಶಿವ ಶೆಟ್ಟಿ, ಪ್ರಕಾಶ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ರಮಾನಾಥ್ ರೈ, ಮಿಥುನ್ ರೈ, ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ಜಯಕರ್ ಶೆಟ್ಟಿ ಇಂದ್ರಾಳಿ, ಬಂಟ ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು. ಕದ್ರಿ ನವನೀತ್ ಶೆಟ್ಟಿ ನಿರೂಪಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com