Breaking News

ಪತ್ರಕರ್ತ ಶೇಖರ ಅಜೆಕಾರು ಹೃದಯಾಘಾತದಿಂದ ನಿಧನ, ಪತ್ರಕರ್ತರ ಕಂಬನಿ

 

ಕಾರ್ಕಳ: ಹಿರಿಯ ಪತ್ರಕರ್ತ, ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಶೇಖರ ಅಜೆಕಾರು (54) ಅವರು ಮಂಗಳವಾರ  ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಕಾರ್ಕಳದ ಅಜೆಕಾರಿನಲ್ಲಿ  ತಮ್ಮ ಮನೆಯಲ್ಲಿ ಕುಸಿದು ಬಿದ್ದರು, ಅವರನ್ನು ತಕ್ಷಣವೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅವರು ನಿಧನರಾಗಿದ್ದರು.

ಮೃತರಿಗೆ ಪತ್ನಿ,  ಪುತ್ರ ಹಾಗೂ ಪುತ್ರಿ ಇದ್ದಾರೆ. ಅಜೆಕಾರು ಅವರ ನಿಧನಕ್ಕೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪತ್ರಕರ್ತರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮುಂಬೈನಲ್ಲಿ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಆರಂಭಿಸಿದ್ದ ಶೇಖರ ಅಜೆಕಾರು ಅವರು ಬಳಿಕ ಹಲವು ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಜನವಾಹಿನಿ ಪತ್ರಿಕೆ ಆರಂಭಗೊಂಡಾಗ ಹಲವು ಒಡನಾಡಿಗಳ ಜತೆಗೆ  ಪತ್ರಿಕೆ ಸೇರಿದ್ದರು.‌ ಬಳಿಕ ಕನ್ನಡ ಪ್ರಭ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಪತ್ರಿಕಾ ವೃತ್ತಿಯ ಜತೆಗೆ ಸಾಹಿತ್ಯ ಕಾರ್ಯಕ್ರಮಗಳಲ್ಲಿ ತೊಡಗಿಸಿದ್ದರು. ಬೆಳದಿಂಗಳ ಸಾಹಿತ್ಯ ಸಮ್ಮೇಳನ, ಕವಿಗೋಷ್ಟಿ  ರೀತಿಯ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸಿ ಗಮನ ಸೆಳೆದಿದ್ದರು.

  1.  

ಹಲವಾರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದ್ದ ಶೇಖರ್‌ ಅಜೆಕಾರು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರಿಗೆ ಚಿರಪರಿಚಿತ ಹೆಸರು. ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

Shekar Ajekaru (54), a veteran journalist and literary activist, died of a heart attack on Tuesday. He collapsed at his home in Ajekar, Karkala, and was immediately rushed to Karkala Government Hospital where he succumbed to his injuries.

The deceased is survived by his wife, son and daughter. Journalists from Dakshina Kannada, Udupi district have paid tribute to Ajekaru’s death.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com