Breaking News

ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಜತೆ ಆಗೋಣ: ನ್ಯಾ. ಅಬ್ದುಲ್ ರಹೀಂ

 

ಕುಂದಾಪುರ:  ಸಮಾಜದ ಋಣ ನಮ್ಮ ಮೇಲಿದ್ದು, ಭ್ರಷ್ಟಾಚಾರ ತೊಲಗಿಸದಿದ್ದರೆ ದೇಶ ಮತ್ತು ಸಮಾಜ ಅಭಿವೃದ್ಧಿ ಆಗಲ್ಲ. ಜನರಿಗೆ ಕಾನೂನಿನ ಅರಿವು ಇರಬೇಕು. ಭ್ರಷ್ಟಾಚಾರ ಎಂಬ ಸಾಮಾಜಿಕ ಪಿಡುಗನ್ನು ನಿರ್ಮೂಲನೆ ಮಾಡಲು ಕಟಿಬದ್ದರಾಗಬೇಕು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಹೇಳಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ಕುಂದಾಪುರ ವಕೀಲರ ಸಂಘ, ಅಭಿಯೋಗ ಇಲಾಖೆ ಮತ್ತು ತಾಲೂಕು ಆಡಳಿತದ ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯಿತಿ  ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಭ್ರಷ್ಟಾಚಾರ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ನಡೆದ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

  1.  

ಸರಕಾರಿ ಕೆಲಸ ಎಲ್ಲರಿಗೂ ಸಿಗುವುದಿಲ್ಲ. ಸಿಕ್ಕವರು ಪುಣ್ಯವಂತರು, ಆದರೆ ಅಧಿಕಾರ ದುರುಪಯೋಗ ಮಾಡಿಕೊಳ್ಳಬಾರದು. ಭ್ರಷ್ಟಾಚಾರಕ್ಕೆ ಆತ್ಮಬಲ ಮದ್ದು. ಪ್ರಾಮಾಣಿಕ ಅಧಿಕಾರಿಗಳ ಹೆಸರು ಬಳಸಿಕೊಂಡು ಜನರನ್ನು ವಂಚಿಸಿ, ಒಳ್ಳೆಯ ಅಧಿಕಾರಿಗಳ ಹೆಸರು ಹಾಳುಮಾಡುವರ ಬಗ್ಗೆ ಸರಕಾರಿ ನೌಕರರು, ಅಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು ಎಂದರು.

ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್. ಕಾನೂನು ಮಾಹಿತಿ ನೀಡಿದರು. ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್. ಆರ್. ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಡಿ. ರೋಹಿಣಿ, ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್., ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು., ತಾಲೂಕು ಪಂಚಾಯಿತಿ  ಇಒ ಶಶಿಧರ ಕೆ.ಜಿ., ಸಹಾಯಕ ಸರ್ಕಾರಿ ಅಭಿಯೋಜಕ ಉದಯ ಕುಮಾರ್ ಬಿ.ಎ., ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ ರಾವ್ ಇದ್ದರು.

ವಂಡ್ಸೆ ನಾಡಾ ಕಚೇರಿ ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ ಸ್ವಾಗತಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com