Breaking News

ಚಿಕ್ಕಮಗಳೂರು ದತ್ತಮಾಲಾ ಅಭಿಯಾನ: ಬಿಗಿ ಪೊಲೀಸ್ ಬಂದೋಬಸ್ತ್

 

ಚಿಕ್ಕಮಗಳೂರು: ಬಾಬಾ ಬುಡನ್ ದರ್ಗಾದಲ್ಲಿ ದತ್ತಮಾಲಾ ಅಭಿಯಾನಕ್ಕೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಬಾಬಾ ಬುಡನ್ ದರ್ಗಾ ಸೇರಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ 200 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಜಿಲ್ಲೆಯಾದ್ಯಂತ 26 ಚೆಕ್ ಪೋಸ್ಟ್, 49 ಸೆಕ್ಟರ್ ಆಫೀಸರ್ ನೇಮಿಸಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಡ್ರೋನ್ ಕಣ್ಗಾವಲು ಅಳವಡಿಸಲಾಗಿದೆ.

ನ. 4 ರಿಂದ 6 ವರೆಗೆಗೆ ದತ್ತಪೀಠ, ಮಾಣಿಕ್ಯಧಾರ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಗಾಳಿಕೆರೆಗೆ ಜನರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

  1.  

Following the call for Dattamala Abhiyan at Baba Budan Dargah, heavy police presence has been made across Chikmagalur district.

More than 200 policemen have been deployed across Chikmagalur district including Baba Budan Dargah. 26 check posts, 49 sector officers have been appointed across the district. CCTV camera, drone surveillance is installed in sensitive and highly sensitive areas.

of The district administration has issued an order restricting the entry of people to Dattapeeth, Manikyadhara, Sitalayyanagiri, Manikyadhara, Chatikere from 4th to 6th.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com