Breaking News

ಕೇರಳದಲ್ಲಿ ಕೋವಿಡ್ ಉಪತಳಿ ಪತ್ತೆ; ರಾಜ್ಯದಲ್ಲಿ ಹೈಅಲರ್ಟ್ ಗೆ ಸಚಿವ ದಿನೇಶ್ ಸೂಚನೆ

 

ಬೆಂಗಳೂರು: ಕೋವಿಡ್ ಉಪತಳಿ ಜೆ ಎನ್ 1 ದೇಶದಲ್ಲಿಯೂ ಕಂಡು ಬಂದಿದ್ದು, ಕೇರಳದಲ್ಲಿ ಮೊದಲ ಪ್ರಕರಣ ಪತ್ತೆಯಾಗಿರುವುದು ಆತಂಕಕ್ಕೆ ಕಾರಣ ಆಗಿದೆ.

ಜೆಎನ್ 1 ರೂಪಾಂತರಿಯು ಓಮೈಕ್ರಾನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಇದನ್ನು ಪಿರೋಲಾ ಎಂದು ಕರೆಯಲಾಗುತ್ತದೆ. ಇದು ಅಪಾಯಕಾರಿಯೇ, ಇಲ್ಲವೇ ಎನ್ನುವುದು ಇನ್ನೂ ಸಂಶೋಧನೆಗಳಿಂದ ತಿಳದು ಬಂದಿಲ್ಲ. ಆದರೆ, ಶರವೇಗದಲ್ಲಿ ಹಬ್ಬುತ್ತಿದೆ. ಕೇರಳದ ಕಣ್ಣೂರಿನಲ್ಲಿ 80 ವರ್ಷದ ವೃದ್ಧರೊಬ್ಬರು ಕೋವಿಡ್‌ಗೆ ಬಲಿ ಆಗಿದ್ದಾರೆ. ಎರಡು ದಿನಗಳಲ್ಲಿ 2 ನೇ ಸಾವು ಆಗಿರುವುದು ಕಳವಳಕ್ಕೆ ಕಾರಣ ಆಗಿದೆ.

ವೃದ್ಧ ಸಾವನ್ನಪ್ಪಿದ ಕಣ್ಣೂರಿನ ಪಾನೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭಗಳ ಮೇಲೆ ನಿರ್ಬಂಧಗಳನ್ನು ಹಾಕಲಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಹೈ ಅಲರ್ಟ್ ಆಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಿ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

  1.  

ಈ ಕುರಿತು ಅವರು ಪ್ರತಿಕ್ರಿಯಿಸಿ, ಮಂಗಳವಾರ ಸಭೆ ಕರೆದಿದ್ದು ನಂತರ ಸರ್ಕಾರಕ್ಕೆ ಸಲಹೆಗಳನ್ನ ನೀಡಲಾಗುತ್ತದೆ. ಎಲ್ಲರೂ ಎಚ್ಚರಿಕೆಯಿಂದ ಇರೋಣ. ಅನಾಹುತ ಆಗುವುದಕ್ಕೆ ಬಿಡಬಾರದು ಎಂದಿದ್ದಾರೆ. ಗಡಿ ಭಾಗಗಳನ್ನು ಸೀಲ್ ಮಾಡೋದು, ರೈಲ್ವೇ ವಿಮಾನ ನಿಲ್ದಾಣಗಳಲ್ಲಿ ಸದ್ಯಕ್ಕೆ ತಪಾಸಣೆ ಮಾಡೋದು ಅಗತ್ಯವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗಳನ್ನ ಹೆಚ್ಚು ಮಾಡುತ್ತೇವೆ. ರಾಜ್ಯ, ಜಿಲ್ಲಾ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದ್ದಾರೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ಅವರು ಮಾತನಾಡಿ, ಕೋವಿಡ್ ಉಪತಳಿಯ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಎರಡು ತಿಂಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ಈ ತಳಿ ಭಾರತೀಯರೊಬ್ಬರಲ್ಲಿ ಪತ್ತೆಯಾಗಿತ್ತು. ನಂತರ, ಭಾರತದ ಬೇರೆ ಕಡೆಯಲ್ಲೂ ಪತ್ತೆ ಆಗಿದೆ. ಕೇರಳದಲ್ಲಿಯೂ ಸೋಂಕು ಪತ್ತೆಯಾಗಿದ್ದು ಗಾಬರಿ ಪಡುವ ಅಗತ್ಯವಿಲ್ಲ. ಕೇರಳದಲ್ಲಿ ಆರೋಗ್ಯ ವ್ಯವಸ್ಥೆ ಉತ್ತಮ ಇದೆ. ಜಿನೋಮಿಕ್ ಸೀಕ್ವೆನ್ಸಿಂಗ್ ಮೂಲಕ ಇದನ್ನು ಪತ್ತೆ ಹಚ್ಚಬಹುದು. ಯಾರೂ ಚಿಂತಿ ಪಡೆಬೇಕಿಲ್ಲ ಎಂದರು.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com