Breaking News

ಅಕ್ರಮ ಮರಳು ಗಣಿಗಾರಿಕೆ, ನಿರ್ಧಾಕ್ಷಿಣ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಸೂಚನೆ

 

ಮಂಗಳೂರು:  ಅಕ್ರಮ ಮರಳು ಗಣಿಗಾರಿಕೆ ನಡೆಸುವುದು ಕಂಡು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಸಮುದ್ರದ ಮತ್ತು ನದಿ ಕಡಲ ತೀರದಲ್ಲಿ ಸಿಆರ್ ಜೆಡ್  ಮರಳು ಗಣಿಗಾರಿಕೆ ನಿಷೇಧ ಇರುವುದರಿಂದ ಅಕ್ರಮ ಮರಳು ಗಣಿಗಾರಿಕೆ ಆಗದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಎಚ್ಚರ ವಹಿಸಬೇಕು. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಅಕ್ರಮವಾಗಿ ಮರಳು ಗಣಿಗಾರಿಕೆ ಆಗುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.

  1.  

ಅಕ್ರಮ ಮರಳು ಗಣಿಗಾರಿಕೆ ಕಂಡು ಬಂದ ತಕ್ಷಣವೇ ಸಂಬಂಧಿಸಿದ ವಾಹನ ಸಂಖ್ಯೆಯ ಆಧಾರದ ಮೇಲೆ ಪೊಲೀಸ್ ಇಲಾಖೆಯಲ್ಲಿ ದೂರು ದಾಖಲಿಸಬೇಕು. ಇದರಿಂದ ಯಾವ ಸ್ಥಳದಿಂದ ಅಕ್ರಮ ಮರಳು ಸಾಗಾಣಿಕೆಯಾಗುತ್ತಿದೆ ಎಂದು ಕಂಡು ಹಿಡಿಯಬಹುದು. ಈ ರೀತಿಯ ಪ್ರಕರಣಗಳನ್ನು ನಿರ್ಲಕ್ಷಿಸದೆ, ಅದರ ಆಳದವರೆಗೆ ಹೋಗಿ ಮಾಹಿತಿ ಕಲೆ ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಮಟ್ಟದಲ್ಲಿ ಇರುವ ಕಂಟ್ರೋಲ್ ರೂಂ ಮೂಲಕ ಮತ್ತು ಸಿಸಿಟಿವಿ  ಕ್ಯಾಮೆರಾಗಳ ಮೂಲಕ ಈ ಕಾರ್ಯವನ್ನು ಚುರುಕುಗೊಳಿಸಬೇಕು.  ಪರವಾನಗಿ ಇಲ್ಲದೆ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ವಹಿಸಿ ಅಂತಹ ಪ್ರಕರಣಗಳ ಮೇಲೆ ಕಾನೂನು ರೀತಿ ದಂಡ ವಿಧಿಸಬೇಕು ಎಂದು ಎಲ್ಲ ತಹಶೀಲ್ದಾರ್ ಗಳಿಗೆ ಸೂಚಿಸಿದರು.

ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಬರುವ ವಾಹನಗಳ ಮೇಲೆ ಹದ್ದಿನ ಕಣ್ಣು ಇಡಬೇಕು. ಅಕ್ರಮ ಮರಳು ಗಣಿಗಾರಿಕೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಂಬಂಧಪಟ್ಟ ಅಧಿಕಾರಿಗಳೇ ಜವಾಬ್ದಾರಿ ವಹಿಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್  ಅವರು ಮಾತನಾಡಿ,  ಮರಳು ಕಳ್ಳತನ ಮಾಡುವ ವಾಹನ ಅಥವಾ ದೋಣಿಯನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಬೇಕು. ನಾನ್ ಸಿ.ಆರ್.ಜೆಡ್ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಅಥವಾ ಮರಳು ದಾಸ್ತಾನು ತಡೆಗಟ್ಟಲು ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದರು.

ಡಿಸಿಪಿ ಸಿದ್ದಾರ್ಥ್ ಗೋಯೆಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಥನಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ ಗಿರೀಶ್  ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com