Breaking News

ಚಿತ್ರದುರ್ಗ: ಸೇತುವೆಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲಿಯೇ ನಾಲ್ವರ ಸಾವು

 

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.

  1.  

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಈ ಘಟನೆ ನಡೆದಿದೆ.  2 ವರ್ಷದ ಸಿಂಧುಶ್ರೀ, 5 ತಿಂಗಳ ಹಸುಗೂಸು  ಅಯ್ಯಾಳಪ್ಪ, 3 ತಿಂಗಳ ಹಸುಗೂಸು ರಕ್ಷಾ‌ ಮತ್ತು 25 ವರ್ಷದ ಲಿಂಗಪ್ಪ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಳ್ಳಿಯ ನಿವಾಸಿಗಳು ಎಂದು ತಿಳಿದು ಬಂದಿದೆ‌. ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಅಪಘಾತ ನಡೆದಿದ್ದು ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಠಾಣೆಯ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com