Breaking News

ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಮೂಡಿಸಿ: ಸಚಿವ ಮಂಕಾಳ ವೈದ್ಯ

 

ಕಾರವಾರ: ಸಂವಿಧಾನದ ಮಹತ್ವ ಮತ್ತು ಆಶಯಗಳ ಕುರಿತಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಮೂಲಕ ಜಾಗೃತಿ ಮೂಡಿಸುವಂತೆ ಸಚಿವ ಮಂಕಾಳ  ವೈದ್ಯ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಆಯೋಜನೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ 229 ಗ್ರಾಮ ಪಂಚಾಯತ್ ಗಳಲ್ಲಿ ಈ ಜಾಗೃತಿ ಜಾಥಾ ಸಂಚರಿಸುವಂತೆ ಯೋಜನೆ ರೂಪಿಸಿ. ಗ್ರಾಮ ಪಂಚಾಯತ್‌ಗಳಿಗೆ ಆಗಮಿಸುವ ಜಾಥಾವನ್ನು ಸ್ಥಳೀಯಾಡಳಿತಗಳು ಸ್ವಾಗತಿಸಿ, ಸಾರ್ವಜನಿಕರಿಗೆ ಸಂವಿಧಾನ ಪೀಠಿಕೆ ಪ್ರತಿಗಳನ್ನು ವಿತರಿಸಿ ಸಂವಿಧಾನ ಮಹತ್ವ ಕುರಿತು ಅರಿವು ಮೂಡಿಸಬೇಕು ಎಂದರು.

  1.  

ಗ್ರಾಮ ಪಂಚಾಯತ್ ನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಗ್ರಾಮದಲ್ಲಿ ಅನುಷ್ಠಾನವಾಗಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ಇದುವರೆಗೆ ಯೋಜನೆಗೆ ಒಳಪಡದ ಕುಟುಂಬಗಳು ಮತ್ತು ಅರ್ಹ ಫಲಾನುಭವಿಗಳಿದ್ದಲ್ಲಿ ಅವರನ್ನು ಗುರುತಿಸಿ, ಅವರಿಗೆ ಯೋಜನೆಗಳನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು ಹಾಗೂ ಯೋಜನೆಯ ನೊಂದಣಿಯಲ್ಲಿ ಸಮಸ್ಯೆಗಳು ಇದ್ದಲ್ಲಿ ಸ್ಥಳದಲ್ಲೇ ಅವುಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದರು.

ಸಂವಿಧಾನದ ಆಶಯದಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರಕಾರದ ಜನಪರ ಯೋಜನೆಗಳು ಮತ್ತು ಸೌಲಭ್ಯಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ತಲುಪಿಸಬೇಕು ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಆಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.

ಸಂವಿಧಾನ ಜಾಗೃತಿ ಕುರಿತು ಜಾಥಾಗೆ ಸಚಿವರು ಜ. 26 ರಂದು ಚಾಲನೆ ನೀಡಲಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ , ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com