Breaking News

ಸಂವಿಧಾನದ ಆಶಯದ ಸಾಕಾರಕ್ಕೆ ಎಲ್ಲರೂ ಜತೆಯಾಗೋಣ: ಸಚಿವ ಮಂಕಾಳ ವೈದ್ಯ

 

ಕಾರವಾರ: ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದಾಗ ರಾಜ್ಯವು ರಾಮರಾಜ್ಯ ಆಗಲಿದೆ. ನಮ್ಮ ಸಂವಿಧಾನ ದೇಶದ ಪವಿತ್ರ ಗ್ರಂಥವಾಗಿದೆ.  ಸಾಮಾನ್ಯ ಜನರ ಧ್ವನಿ ಆಗಿದ್ದು, ಅದರ ಆಶಯದಂತೆ ಬದುಕಲು ಸಮಾನ ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ಸರಕಾರ ಅಧಿಕಾರ‌ಕ್ಕೆ ಬಂದ ನಂತರ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಕಾರವಾರ ಪೊಲೀಸ್ ಪರೇಡ್ ಮೈದಾನದಲ್ಲಿ ಶುಕ್ರವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ 75 ನೇ  ಗಣರಾಜ್ಯೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರಿಗೆ ಆರ್ಥಿಕ ಸ್ವಾವಲಂಬನೆ ತರುವಲ್ಲಿ ಯಶಸ್ವಿ ಆಗುತ್ತಿವೆ. ಸರಕಾರವು ಜನ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನ ಕಲ್ಯಾಣಕ್ಕೆ ಮುಂದಾಗಿದೆ ಎಂದರು.

  1.  

ಪೊಲೀಸ್, ಗೃಹರಕ್ಷಕ, ಅರಣ್ಯ ಇಲಾಖೆ, ಎನ್‌ಸಿಸಿ, ಎನ್‌ಎಸ್‌ಎಸ್‌, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ 14 ತಂಡಗಳು ಶಿಸ್ತುಬದ್ಧ ಪಥಸಂಚಲನ ನಡೆಸಿದವು. ರಾಜ್ಯ ಮಟ್ಟದ ಅಂಗವಿಕಲರ ಕ್ರೀಡಾಕೂಟದಲ್ಲಿ ಬಹುಮಾನ‌ಗಳಿಸಿದ ವಿದ್ಯಾರ್ಥಿಗಳಿಗೆ, ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪಡೆದ ಜಿಲ್ಲೆಯ ಮೂರು ಮಂದಿ ರೈತರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಾಸಕ ಸತೀಶ ಸೈಲ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಬಂದರು ಜಲಸಾರಿಗೆ ಮಂಡಳಿ ಸಿಇಒ ಜಯರಾಮ ರಾಯಚೂರ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಇದ್ದರು.

ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com