Breaking News

ಉತ್ತರ ಕನ್ನಡ ಜಿಲ್ಲೆಯಲ್ಲಿ ಉಪ ಲೋಕಾಯುಕ್ತ ನ್ಯಾ. ಕೆ. ಎನ್. ಫಣೀಂದ್ರ ಪ್ರವಾಸ

 

ಕಾರವಾರ: ರಾಜ್ಯ ಉಪ ಲೋಕಾಯುಕ್ತ ನ್ಯಾ. ಕೆ. ಎನ್. ಫಣೀಂದ್ರ ಅವರು ಮಾರ್ಚ್ 2 ರಿಂದ 4 ರವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.

  1.  

ಪ್ರವಾಸದ ಅವಧಿಯಲ್ಲಿ ಮಾರ್ಚ್ 2 ರಂದು ಬೆಳಿಗ್ಗೆ 10 ರಿಂದ 1. 30 ರವರೆಗೆ ಮತ್ತು ಮಧ್ಯಾಹ್ನ 2. 30 ರಿಂದ 5 ರವರೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು
ಹಮ್ಮಿಕೊಂಡಿರುವುದರಿಂದ, ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ರೀತಿ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ. ಅಹವಾಲುಗಳನ್ನು ಸ್ವೀಕರಿಸಲು, ಬಗೆಹರಿಸಲು ಮೇಲ್ಕಂಡಂತೆ ಸಮಯ ನಿಗದಿಪಡಿಸಿರುತ್ತಾರೆ.

ಮಾರ್ಚ್ 4 ರಂದು ಬೆಳಿಗ್ಗೆ 10 ರಿಂದ 1.30 ರವರೆಗೆ ಮತ್ತು ಮಧ್ಯಾಹ್ನ 2. 30 ರಿಂದ 5 ರವರೆಗೆ ಕಾರವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ
ತನಿಖೆ/ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತಿಯಲ್ಲಿ ವಿಚಾರಣೆ ನಡೆಸಲಾಗುತ್ತದೆ. ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಸದುಪಯೋಗವನ್ನು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com