Breaking News

ವೇಣೂರು ಮಹಾಮಸ್ತಕಾಭಿಷೇಕ, ವಾಹನ ಸಂಚಾರ ಮಾರ್ಗ ಬದಲಾವಣೆ: ಡಿಸಿ ಆದೇಶ

 

ಮಂಗಳೂರು: ವೇಣೂರು ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಮಹೋತ್ಸವ -2024 ಆರಂಭಗೊಂಡಿರುವುದರಿಂದ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಆಗುವ ಸಾಧ್ಯತೆ ಇದೆ ಇರುವುದರಿಂದ ಜಿಲ್ಲಾಧಿಕಾರಿ  ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.

ಆದ್ದರಿಂದ ಫೆ. 22 ರಿಂದ ಮಾರ್ಚ್ 1 ರವೆರೆಗ ಮೂಡುಬಿದಿರೆ ಕಡೆಯಿಂದ ಬಂದು ವೇಣೂರು ಮೇಲಿನ ಪೇಟೆಯ ಮುಖಾಂತರ ಬೆಳ್ತಂಗಡಿ ಸಂಪರ್ಕಿಸುವ ಲಘು ವಾಹನಗಳು ಪಡ್ಯಾರಬೆಟ್ಟು, ಹೊಕ್ಕಾಡಿಗೋಳಿ, ಕೂಡುರಸ್ತೆ, ಉಜಿರೆ, ಮುದ್ದಾಡಿ, ನೈನಾಡು ಮೂಲಕ ಗೋಳಿಯಂಗಡಿ ಆಗಿ ಬೆಳ್ತಂಗಡಿ ರಸ್ತೆಗೆ ಸಂಪರ್ಕಿಸಬೇಕು.

  1.  

ಬೆಳ್ತಂಗಡಿ ಕಡೆಯಿಂದ ಬಂದು ವೇಣೂರು ಪೇಟೆ ಮುಖಾಂತರ ಮೂಡಬಿದ್ರೆ ಕಡೆಗೆ ಹೋಗುವ ಲಘು ವಾಹನಗಳನ್ನು ಗೋಳಿಯಂಗಡಿಯಿಂದ ಪಥ ಬದಲಿಸಿ ನೈನಾಡು, ಬಜಿರೆ, ಆರಂಬೋಡಿ, ಪಡ್ಯಾರಬೆಟ್ಟು ಮೂಲಕ ಮುಖ್ಯ ರಸ್ತೆಯನ್ನು ಸಂಪರ್ಕಿಸಬೇಕು.

ಮೂಡಬಿದಿರೆಯಿಂದ ಬೆಳ್ತಂಗಡಿ ಹೋಗುವ ಘನ ವಾಹನಗಳನ್ನು ಮೂಡುಬಿದಿರೆ ಶಿರ್ತಾಡಿ, ನಾರಾವಿ, ಅಳದಂಗಡಿ, ಗುರುವಾಯನಕೆರೆ ಮೂಲಕ ಬೆಳ್ತಂಗಡಿ ಕಡೆಗೆ ಹಾಗೂ ಬೆಳ್ತಂಗಡಿಯಿಂದ ಮೂಡಬಿದ್ರೆಗೆ ಹೋಗುವ ಘನ ವಾಹನಗಳನ್ನು ಗುರುವಾಯನಕೆರೆ, ನಾರಾವಿ, ಶಿರ್ತಾಡಿ ಹಾಗೂ ಮೂಡಬಿದ್ರೆ ಮೂಲಕ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com