Breaking News

ಸುರಪುರ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘಾತದಿಂದ ನಿಧನ

 

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ರಾಜಾ ವೆಂಕಟಪ್ಪ ನಾಯಕ ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು, 20 ದಿನಗಳಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ.

  1.  

ರಾಜಾ ವೆಂಕಟಪ್ಪ ನಾಯಕ ಅವರು ನಾಲ್ಕು ಬಾರಿ ಸುರಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದರು. 1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಾರ್ಟಿಯಿಂದ ಗೆಲುವು ಸಾಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ದರು. 2023 ರಲ್ಲಿ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಸುರಪುರ ಪರಿಶಿಷ್ಟ ಪಂಗಡ (ಎಸ್‍ಟಿ) ಮೀಸಲು ಕ್ಷೇತ್ರದಿಂದ ಬಿಜೆಪಿ ರಾಜುಗೌಡ ಅವರನ್ನು ರಾಜಾ ವೆಂಕಟಪ್ಪ ನಾಯಕ ಮಣಿಸಿದ್ದರು. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಅವರಿಗೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿತ್ತು, ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com