Breaking News

ಪ್ಲಾಸ್ಟಿಕ್‌ ಮುಕ್ತ ನಗರ ನಿರ್ಮಾಣ ನಮ್ಮ ಹೊಣೆ: ಮೇಯರ್‌ ಸುಧೀರ್‌ ಶೆಟ್ಟಿ

 

ಮಂಗಳೂರು: ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆ ಹಂತ ಹಂತವಾಗಿ ತ್ಯಜಿಸಬೇಕು. ಮಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ನಿರ್ಮಾಣ ಮಾಡಲು ನಾವೆಲ್ಲರೂ ಪಟ ತೋಡಬೇಕು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.

ಏಕ ಬಳಕೆಯ ಪ್ಲಾಸ್ಟಿಕ್ಬಳಕೆಯನ್ನು ಸಂಪೂರ್ಣ ನಿಷೇಧಿಸುವ ಕುರಿತು ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

  1.  

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕಾಗಿ ಮೊದಲ ಹಂತದಲ್ಲಿ ಕರ್ನಾಟಕ ಸರಕಾರ ದ.ಕ.ಜಿಲ್ಲೆಯ ಮಂಗಳೂರು ಮತ್ತು ಧರ್ಮಸ್ಥಳ ಸೇರಿದಂತೆ ರಾಜ್ಯದ 5 ನಗರಗಳನ್ನು ಪ್ಲಾಸ್ಟಿಕ್ ಮುಕ್ತ ನಗರಗಳನ್ನಾಗಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ. ಕ್ರಿಯಾ ಯೋಜನೆಗಳನ್ನು ತಯಾರಿಸಿ ಅರಣ್ಯ, ಪರಿಸರ, ಜೀವಿಪರಿಸ್ಥಿತಿ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸುವಂತೆ ಆದೇಶ ನೀಡಿದೆ ಎಂದರು.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಎಂಜಿನಿಯರ್ ಮಹೀಮಾ ಪಾಟೀಲ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿ ವಿಜಯ ಹೆಗ್ಡೆ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.

ಉಪಮೇಯರ್ ಸುನೀತಾ, ಪಾಲಿಕೆ ಉಪ ಆಯುಕ್ತರಾದ ಎಂ.ರವಿಕುಮಾರ್ ಮತ್ತು ಗಿರೀಶ್ ನಂದನ್ ಎಂ, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ವರುಣ್ ಚೌಟ,ಭರತ್ ಕುಮಾರ್, ಗಣೇಶ್ ,ಲೋಹಿತ್ ಅಮೀನ್ ವೇದಿಕೆಯಲ್ಲಿ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com