Breaking News

ಅಧಿಕಾರ ಹಿಡಿದ ಮರುಕ್ಷಣವೇ ಗ್ಯಾರಂಟಿ ಅನುಷ್ಠಾನ, ನಮ್ಮ ಬದ್ಧತೆ: ಬಿ.ಕೆ. ಹರಿಪ್ರಸಾದ್‌

 

ಬಂಟ್ವಾಳ: ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಅಧಿಕಾರ ಹಿಡಿದ ಮರುಕ್ಷಣವೇ ಜಾರಿಗೆ ತರುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಬಂಟ್ವಾಳ ತಾಲೂಕು ಆಡಳಿತ ವತಿಯಿಂದ ಬಿ.ಸಿ.ರೋಡ್‌ ಗೋಲ್ಡನ್ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಎಲ್ಲಾ ವರ್ಗದ ಜನರ ಬದುಕು ಹಸನು ಮಾಡುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಸರಕಾರವು ಜಾರಿಗೆ ತಂದಿದೆ. ಗ್ಯಾರಂಟಿಗಳ ಅನುಷ್ಠಾನದ ವೇಳೆ ಟೀಕೆ, ಟಿಪ್ಪಣಿಗಳು ಎದುರಾದವು, ಆದರೆ ಎಲ್ಲವನ್ನು ಸಮರ್ಥವಾಗಿ ಎದುರಿಸಿ ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮನಮೋಹನ್ ಸಿಂಗ್ ಅವರ ನೇತೃತ್ವದ ಕೇಂದ್ರ ಸರ್ಕಾರವು ಅಂದಿನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನ್ನಭಾಗ್ಯ ಕಾಯ್ದೆ ಜಾರಿಗೆ ತಂದಿದೆ ಎಂದರು.

  1.  

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅವರು ಮಾತನಾಡಿ, ಸರಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಜನತೆಗೆ ಬಹಳಷ್ಟು ಲಾಭ ಹಾಗೂ ಆರ್ಥಿಕ ಸದೃಢ ಬಂದಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರು ಮಾತನಾಡಿ, ಗ್ಯಾರಂಟಿಗೆ ವಾರಂಟಿ ಇಲ್ಲ ಎಂದು ಅಪಹಾಸ್ಯ ಮಾಡುವ ವಿರೋಧ ಪಕ್ಷದವರಿಗೆ ಬಡವರಿಗೆ ನೀಡುವ ಯೋಜನೆ ಬಗ್ಗೆ ಯಾಕೆ ಹೊಟ್ಟೆಕಿಚ್ಚು ಎಂದು ಪ್ರಶ್ನಿಸಿದರು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಸಚಿವ ಬಿ.ರಮಾನಾಥ ರೈ, ಜಿ‌.ಪಂ. ಸಿಇಒ ಡಾ. ಆನಂದ, ಸಹಾಯಕ ಆಯುಕ್ತ ರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಉಸ್ಮಾನ್ ಇದ್ದರು.

ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮುಮ್ತಾಜ್, ಕೌಶಲ್ಯ ಅಭಿವೃದ್ಧಿ ಯೋಜನೆ ಇಲಾಖೆ ಅಧಿಕಾರಿ ಪ್ರದೀಪ್ ಡಿಸೋಜ, ಮೆಸ್ಕಾಂ ಎ.ಇ.ಇ.ನಾರಾಯಣ ಭಟ್, ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ‌ನಿಯಂತ್ರಣಾಧಿಕಾರಿ ಜಯಕರ್ ಶೆಟ್ಟಿ, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ವಿವಿಧ ಗ್ಯಾರಂಟಿ ಯೋಜನೆ ಹಾಗೂ ವಿವಿಧ ಯೋಜನೆ ಬಗ್ಗೆ ಮಾಹಿತಿ ನೀಡಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com