Breaking News

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 15,72,958 ಮತದಾರರು: ಡಿಸಿ ಡಾ.ಕೆ.ವಿದ್ಯಾಕುಮಾರಿ

 

ಉಡುಪಿ: ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿ ನೀತಿ ಸಂಹಿತೆ ಜಾರಿ ಆಗಿದ್ದು, ಜೂನ್ 6 ರವರಿಗೆ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವು ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು (ಕುಂದಾಪುರ, ಉಡುಪಿ, ಕಾಪು, ಕಾರ್ಕಳ) ಹಾಗೂ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರ (ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ)ಗಳನ್ನು ಒಳಗೊಂಡಿದೆ. 2ನೇ ಹಂತದಲ್ಲಿ ಏ. 26 ರಂದು ಚುನಾವಣೆ ನಡೆಯಲಿದೆ.  ಮಾರ್ಚ್ 28 ರಂದು ಚುನಾವಣೆಗೆ ಅಧಿಸೂಚನೆಯನ್ನು ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಏ.4 ರಂದು ಕೊನೆ ದಿನ ಆಗಿದೆ. ಏ. 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ. 8 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ ಆಗಿದೆ. ಏ. 26 ರಂದು ಮತದಾನ ನಡೆಯಲಿದ್ದು, ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.

  1.  

ಪ್ರತಿ ವಿಧಾನಸಭಾ ಕ್ಷೇತ್ರಗಳಿಗೊಬ್ಬರು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತಲಾ ನಾಲ್ವರು ಎಆರ್‌ಒಗಳು ನೇಮಕಗೊಂಡಿದ್ದಾರೆ. 16 ಮಂದಿಯ ಹಿರಿಯ ಅಧಿಕಾರಿಗಳನ್ನು ಜಿಲ್ಲೆಯ ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆಗಳ ಸಮರ್ಪಕ ನಿರ್ವಹಣೆಗಾಗಿ ವಿವಿಧ ತಂಡಗಳನ್ನು ರಚಿಸಲಾಗಿದೆ ಎಂದರು.

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಇರುವ ಒಟ್ಟು ಮತದಾರರ ಸಂಖ್ಯೆ 15,72,958. ಅವರಲ್ಲಿ ಪುರುಷ ಮತದಾರರ ಸಂಖ್ಯೆ 7,62,558 ಆದರೆ, ಮಹಿಳಾ ಮತದಾರರ ಸಂಖ್ಯೆ 8,10,362. 38 ಮಂದಿ ತೃತೀಯ ಲಿಂಗ ಮತದಾರರು ಇದರಲ್ಲಿ ಸೇರಿದ್ದಾರೆ.  ಕ್ಷೇತ್ರದಲ್ಲಿ ಒಟ್ಟು 565 ಮಂದಿ ಸೇವಾ ಮತದಾರರಿದ್ದಾರೆ. ಕುಂದಾಪುರ 51, ಉಡುಪಿ 51, ಕಾಪು 53, ಕಾರ್ಕಳ 34, ಶೃಂಗೇರಿ 58, ಮೂಡಿಗೆರೆ 83, ಚಿಕ್ಕಮಗಳೂರು 140, ತರೀಕೆರೆ 95 ಮಂದಿ ಸೇವಾ ಮತದಾರರಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಒಟ್ಟು 1842 ಮತಗಟ್ಟೆಗಳನ್ನು ತೆರೆಯಲಾಗುವುದು. ವಿಧಾನಸಭಾ ಕ್ಷೇತ್ರವಾರು ಮತಗಟ್ಟೆಗಳ ಸಂಖ್ಯೆ ಹೀಗಿದೆ. ಕುಂದಾಪುರ-222, ಉಡುಪಿ-226, ಕಾಪು-209, ಕಾರ್ಕಳ- 209, ಶೃಂಗೇರಿ-256, ಮೂಡಿಗೆರೆ-231, ಚಿಕ್ಕಮಗಳೂರು-261 ಹಾಗೂ ತರೀಕೆರೆಯಲ್ಲಿ 228 ಮತಗಟ್ಟೆಗಳಿರುತ್ತವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com