Breaking News

ಉ.ಕ ಜಿಲ್ಲೆಯಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ, ಅಕ್ರಮ ತಡೆಗೆ 25 ಚೆಕ್ ಪೋಸ್ಟ್ : ಡಿಸಿ ಗಂಗೂಬಾಯಿ ಮಾನಕರ

 

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ತಕ್ಷಣವೇ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ  ಜಾರಿಗೊಳಿಸಲಾಗಿದೆಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಲೋಕಸಭಾ ಚುನಾವಣಾ ಪ್ರಯುಕ್ತ ಏ. ರಂದು ಪ್ರಕಟಣೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಏ. 19 ಕೊನೆ ದಿನ. ಏ. 20 ನಾಮಪತ್ರ ಪರಿಶೀಲನೆ ಏ. 22 ನಾಮಪತ್ರ ಹಿಂಪಡೆಯಲು ಕೊನೆ ದಿನ, ಮೇ 7 ರಂದು ಮತದಾನ ನಡೆಯಲಿದೆ , ಜೂನ್ 4 ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಿತ್ತೂರು , ಖಾನಾಪುರ , ಹಳಿಯಾಳ, ಕಾರವಾರ, ಕುಮಟಾ, ಭಟ್ಕಳ, ಸಿರಸಿ, ಯಲ್ಲಾಪುರ ವಿಧಾನಸಭಾ ಕ್ಷೇತ್ರ ಸೇರಿ 8 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಒಟ್ಟು 16,22,857 ಮತದಾರರಿದ್ದು, 8,15, 599 ಪುರುಷರು, 8,07,242 ಮಹಿಳೆಯರು, 16 ತೃತೀಯ ಲಿಂಗಿ ಮತದಾರರು ಇದ್ದು, ಒಟ್ಟು 1977 ಮತಗಟ್ಟೆಗಳನ್ನು ತೆರೆಯಲಾಗುವುದು ಎಂದರು.

ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಒಟ್ಟು 25 ಚೆಕ್‌ಪೋಸ್ಟ್ ಗಳನ್ನು ತರೆಯಲಾಗಿದ್ದು, ಇಂದಿನಿಂದಲೇ ಎಲ್ಲಾ ಚೆಕ್ ಪೋಸ್ಟ್ ಗಳು ಕಾರ್ಯಾರಂಭ ಮಾಡಿವೆ. ನಿರಂತರವಾಗಿ ಚೆಕ್‌ಪೋಸ್ಟ್ಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು,ಈ ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗುವುದು. ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ನಿಟ್ಟಿನಲ್ಲಿ ಪ್ಲೈಯಿಂಗ್ ಸ್ಕ್ವಾಡ್, ವಿಡಿಯೊ ಸರ್ವೇಲೆನ್ಸ್ ತಂಡ, ವಿಡಿಯೋ ವೀಕ್ಷಣಾ ತಂಡ, ಅಂಕಿ ಅಂಶ ಪರಿಶೀಲನಾ ತಂಡ, ಸೆಕ್ಟರ್ ಅಧಿಕಾರಿಗಳು, ಲೆಕ್ಕಪತ್ರ ತಂಡ ಸೇರಿದಂತೆ ವಿವಿಧ ತಂಡಗಳಿಗೆ ಅಗತ್ಯ ಸಿಬ್ಬಂದಿ ನಿಯೋಜಿಸಿದ್ದು, ಅವರಿಗೆ ಸೂಕ್ತ ತರಬೇತಿ ನೀಡಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಅಗತ್ಯಕ್ರಮ ಕೈಗೊಳ್ಳಲಾಗಿದೆ ಎಂದರು.

ಸಿಂಗಲ್ ವಿಂಡೋ ಸಮಿತಿ, ಎಂಸಿಎಂಸಿ ಸಮಿತಿ, ಮೀಡಿಯಾ ಸ್ಕೂಟನಿ ತಂಡ, ಲೆಕ್ಕಪತ್ರ ಪರಿಶೀಲನಾ ತಂಡ, ದೂರು ನಿರ್ವಹಣಾ ತಂಡಗಳಿಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ, ಶಾಂತಿಯುತ ಚುನಾವಣೆ ನಡೆಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಸಾರ್ವಜನಿಕರು

  1.  

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಯಾವುದೇ ಅಗತ್ಯ ಮಾಹಿತಿಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿನ 1435 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಒಟ್ಟು 2489 ಪೊಲೀಸ್ ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಮತದಾನ ದಿನದಂದು ಕರ್ತವ್ಯ ನಿರ್ವಹಿಸಲು ಹೆಚ್ಚುವರಿಯಾಗಿ ಕೇಂದ್ರ ಭದ್ರತಾ ಸಿಬ್ಬಂದಿ ಮತ್ತು ರಾಜ್ಯ ಪೊಲೀಸ್ ಪಡೆಗಳ ಆಗಮಿಸಲಿವೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದರು.

ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳ ಮೂಲಕ ಮತದಾನ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಿದ್ದು, ಈ ಹಿಂದೆ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದು ಜಿ.ಪಂ ಸಿಇಒ ಈಶ್ವರ ಕಾಂದೂ ತಿಳಿಸಿದರು.

ಎಡಿಸಿ ಪ್ರಕಾಶ್ ರಜಪೂತ್ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com