Breaking News

ನವದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಂಧನ, ಇಡಿ ಅಧಿಕಾರಿಗಳಿಂದ ವಿಚಾರಣೆ

 

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ಪ್ರಮುಖ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ಗುರುವಾರ ರಾತ್ರಿ ಬಂಧನದ ವಾರೆಂಟ್‌ ಜತೆಗೆ ಬಂದು ಬಂಧನ ಮಾಡಿದ್ದಾರೆ.

  1.  

ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ನವದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ಈಡಿ) ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿತು. ಕೇಜ್ರಿವಾಲ್ ಅವರು ಈಗ ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು. ಆದರೆ ಸುಪ್ರೀಂ ವಿಚಾರಣೆಯನ್ನು ನಾಳೆಗೆ ಮುಂದೂಡಿತ್ತು ಎಂದು ತಿಳಿದು ಬಂದಿದೆ.

ಎರಡು ತಾಸುಗಳಿಂದ ಇಡಿ ಅಧಿಕಾರಿಗಳು ಸಿಎಂ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com