Breaking News

ಬಿಜೆಪಿ 5ನೇ ಪಟ್ಟಿ ರೀಲಿಸ್: ಕಾಗೇರಿಗೆ ಲಕ್, ಅನಂತ ಕುಮಾರ್ ಹೆಗಡೆಗೆ ನಿರಾಶೆ, ಶೆಟ್ಟರ್ ಜೇಬಿಗೆ ಟಿಕೆಟ್

 

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿಯ 5 ನೇ ಪಟ್ಟಿ ಫೈನಲ್ ಆಗಿದ್ದು, ತೀವ್ರ ಕುತೂಹಲ ಮೂಡಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಟಿಕೆಟ್ ತಿಕ್ಕಾಟದ ನಂತರ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅವರ ಪಾಲಾಗಿದೆ. ಕಳೆದ  ನಾಲ್ಕು ತಿಂಗಳಿಂದ ಆ್ಯಕ್ಟಿವ್ ಆಗಿ ಸುತ್ತಾಟ ನಡೆಸುತ್ತಾ, ತಮ್ಮ ಹಿಂದೂಪರವಾದ ಹೇಳಿಕೆ ಮೂಲಕ ಎಲ್ಲರ ಗಮನ ಸೆಳೆದಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದೆ.

  1.  

ಇನ್ನೂ ಸ್ಥಳೀಯರ ವಿರೋಧದ ನಡುವೆಯೂ ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಟಿಕೆಟ್ ನೀಡಲಾಗಿದೆ. ರಾಯಚೂರು ಎಸ್ ಟಿ ಮೀಸಲು ಕ್ಷೇತ್ರದಲ್ಲಿ ರಾಜ ಅಮರೇಶ್ವರ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ.

ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದ ಅನಂತ ಕುಮಾರ್ ಹೆಗಡೆ ಅವರು ಚುನಾವಣೆಗೆ ಸ್ಪರ್ಧೆ ಮಾಡುತ್ತಾರೋ ಇಲ್ಲವೋ ಎಂಬುದರ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಪ್ರತಿನಿಧಿಸುತ್ತಿರುವ ಚಿತ್ರದುರ್ಗ ಎಸ್ ಸಿ ಮೀಸಲು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಬಾಕಿ ಇದೆ.  ಬಿಜೆಪಿ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರವನ್ನು ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com