Breaking News

ಏ. 4 ರಂದು ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ: ಜಗದೀಶ್ ಆಳ್ವ

 

ಮಂಗಳೂರು: ಬಿಜೆಪಿ ಲೋಕಸಭಾ ಚುನಾವಣೆಯ ಅಭ್ಯರ್ಥಿ ಬೃಜೇಶ್ ಚೌಟ ಅವರು ಏ. 4 ರಂದು ನಾಮಪತ್ರ ಸಲ್ಲಿಸಲಿದ್ದು, ಈ ಪ್ರಯುಕ್ತ ಬಿಜೆಪಿ ಚುನಾವಣಾ ಪ್ರಚಾರ ಕಚೇರಿಯಿಂದ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

  1.  

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚಂದ್ರಹಾಸ್ ಪಂಡಿತ್ ಹೌಸ್ ಅವರು ಮಾತನಾಡಿ, ಏ 4 ರಂದು ನಡೆವ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಬಿಜೆಪಿಯ ತಮಿಳುನಾಡು ರಾಜ್ಯದ ಹಿರಿಯ ಮುಖಂಡ ಅಣ್ಣಾಮಲೈ ಭಾಗವಹಿಸಲಿದ್ದಾರೆ. ಈ ಬಾರಿ ಬೃಜೇಶ್ ಚೌಟ ಅವರಿಗೆ ಅವಕಾಶ ‌ಸಿಕ್ಕಿರುವುದರಿಂದ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ನಾಮಪತ್ರ ಸಲ್ಲಿಸುವ ವೇಳೆ ಕಾಲ್ನಡಿಗೆ ಜಾಥಾದಲ್ಲಿ ಸಹಸ್ರಾರು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದ.ಕ.ಜಿಲ್ಲೆ ಬಿಜೆಪಿಯ ಭದ್ರಕೋಟೆ ಆಗಿರುವುದರಿಂದ ಕಾರ್ಯಕರ್ತರು ಉತ್ಸಾಹ ದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ಮಂಗಳೂರು ಮಂಡಲದ ಪ್ರಧಾನ ಕಾರ್ಯದರ್ಶಿ, ಸುಜಿತ್ ಮಾಡೂರು, ದಯಾನಂದ ತೊಕ್ಕೊಟ್ಟು ,ಚುನಾವಣಾ ನಿರ್ವಹಣಾ ಸಮಿತಿ ಸಹ ಸಂಚಾಲಕ ಹೇಮಂತ್ ಶೆಟ್ಟಿ ,ಜೀವನ್ ಕುಮಾರ್ ತೊಕ್ಕೊಟ್ಟು ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com