Breaking News

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಪೋಕ್ಸೊ ಪ್ರಕರಣ ದಾಖಲು, ಬಂಧನ

 

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧನ ಮಾಡಿದ್ದಾರೆ.

ಬೋಳ ವಂಜಾರಕಟ್ಟೆ ನಿವಾಸಿ, ಇಚ್ಚೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ (58) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

  1.  

ಬಂಧಿತ ಆರೋಪಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ವಿದ್ಯಾರ್ಥಿನಿಯ ಸಹೋದರಿಯ ಮೊಬೈಲ್‌ಗೆ ಅಶ್ಲೀಲ ಫೋಟೊಗಳನ್ನು ಕಳುಹಿಸಿ ತೊಂದರೆ ನೀಡುತ್ತಿದ್ದ ಎಂದು ದೂರಲಾಗಿದೆ.

ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ಪೊಲೀಸರು ಉಡುಪಿ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com