Breaking News

ಮಂಗಳೂರಿನಲ್ಲಿ ಸಂಭ್ರಮದ ಈದ್‌ ಉಲ್‌ ಫಿತ್ರ್‌ ಆಚರಣೆ, ಪರಸ್ಪರ ಶುಭಾಶಯ ವಿನಿಮಯ

 

ಮಂಗಳೂರು: ಪವಿತ್ರ ರಂಜಾನ್‌ ಅನ್ನು ಕರಾವಳಿಯ ಮಂಗಳೂರಿನಲ್ಲಿ ಮುಸ್ಲಿಂರು ಸಡಗರ, ಸಂಭ್ರಮದಿಂದ ಈದ್‌ ಉಲ್ ಫಿತ್ರ್ ಆಚರಣೆ ಮಾಡಿದರು.

ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಜ್‌ , ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು.

ಈದ್ ನಮಾಜ್‌ -ಖುತ್ಬಾದ ಬಳಿಕ ದಫನ್ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥಿಸಿದರು. ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ತಿಳಿಸಿದರು.

  1.  

ಜಿಲ್ಲೆಯ ಬಹುತೇಕ ಎಲ್ಲ ಮಸೀದಿ-ಈದ್ಗಾಗಳಲ್ಲಿ ವಿಶೇಷ ನಮಾಜ್‌, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ಹಬ್ಬದ ಸಂಭ್ರಮ ಕಂಡು ಬಂತು.

ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಉಪವಾಸ ವ್ರತ ಮಾಡಿದವರು ಹೊಸ ಬಟ್ಟೆಬರೆ ಧರಿಸಿ, ವಿಶಿಷ್ಟ ಬಗೆಯ ತಿಂಡಿ- ತಿನಿಸು ಸೇವಿಸಿ ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದರು.

ನಗರದ ಬಾವುಟಗುಡ್ಡದ ಈದ್ಗಾ ಜುಮಾ ಮಸ್ಜಿದ್‌ನಲ್ಲಿ ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಖುತ್ಬಾ ಪಾರಾಯಣಗೈದರು. ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್ಹಾಜ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಈದ್ ನಮಾಜ್ ಗೆ ನೇತೃತ್ವ ವಹಿಸಿದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com