Breaking News

ಎನ್‌ಡಿಎ ಮೈತ್ರಿಗೆ ಗೆಲುವು ನಿಶ್ವಿತ, ಕ್ಷೇತ್ರದ ಅಭಿವೃದ್ಧಿ ಕೆಲಸಗಳೇ ಗೆಲುವಿಗೆ ಶ್ರೀರಕ್ಷೆ: ಅಭ್ಯರ್ಥಿ ಪಿ.ಸಿ. ಮೋಹನ್

 

ಬೆಂಗಳೂರು: ದೇಶದಲ್ಲಿ ಬಿಜೆಪಿ ಅಲೆ ದೊಡ್ಡದಾಗಿ ಕಾಣುತ್ತಿದೆ. ರಾಜ್ಯದಲ್ಲಿಯೂ ಕೂಡ ಬಿಜೆಪಿ ಪರವಾಗಿ ಮತದಾರರು ಇದ್ದಾರೆ. ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ. ಕಳೆದ ಬಾರಿ ಕ್ಷೇತ್ರದಲ್ಲಿ ಮಾಡಿದ ಕೆಲಸಗಳು ಗೆಲುವಿಗೆ ಶ್ರೀರಕ್ಷೆ ಆಗಲಿವೆ ಎಂದು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಹೇಳಿದರು.

ಬೆಂಗಳೂರು ಸೆಂಟ್ರಲ್  ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ  ಮಾಡಿ, ಅವರು  ಮತನಾಡಿ, 15 ವರ್ಷಗಳಲ್ಲಿ ನನ್ನ ಸಂಸದರ ಪ್ರಾದೇಶಿಕ  ಅನುದಾನ ನನ್ನ ಕ್ಷೇತ್ರ ಬೆಂಗಳೂರು ಸೆಂಟ್ರಲ್  ಅಭಿವೃದ್ಧಿಗಾಗಿ ಬಳಕೆ ಮಾಡಿಕೊಂಡಿದ್ದೇನೆ. ಕ್ಷೇತ್ರದಲ್ಲಿ ಅತ್ಯುತ್ತಮ ಸ್ಕೈವಾಕ್ ನಿರ್ಮಾಣ, ಸೇತುವೆ ನಿರ್ಮಾಣದ ಯೋಜನೆಯನ್ನು ಕೈಗೊಳ್ಳುವ ಮೂಲಕ ಬೆಂಗಳೂರಿಗೆ ತಟ್ಟಿರುವ ಟ್ರಾಫಿಕ್ ದಟ್ಟಣೆ ಸಮಸ್ಯೆ ನಿವಾರಣೆ ಮಾಡಲಾಗಿದೆ ಎಂದರು.

  1.  

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ವ್ಯಾಪ್ತಿಯಲ್ಲಿ ಸೌಕರ್ಯ ಅಭಿವೃದ್ಧಿ ಕಾರ್ಯಗಳಿಗೆ ನನ್ನ ಎಲ್ಲ ಅನುದಾನಗಳು ಬಳಕೆ ಮಾಡಲಾಗಿದೆ. ಬಡಾವಣೆಗಳ ಅಭಿವೃದ್ಧಿ, ಅತ್ಯುತ್ತಮ ರಸ್ತೆಗಳ ನಿರ್ಮಾಣವನ್ನು ಮಾಡಲು ವಿನಿಯೋಗಿಸಿದ್ದೇನೆ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜನರ ಅನುಕೂಲಕ್ಕಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನಿಧಿಯಿಂದ ಮಾಡಿರುವುದಾಗಿ ತಿಳಿಸಿದರು.

ಸುಸಜ್ಜಿತ ರೈಲು ನಿಲ್ದಾಣಗಳನ್ನು ನಿರ್ಮಿಸುವ  ಮೂಲಕ ದೂರ ಪ್ರಯಾಣ ಮಾಡುವ ಬೆಂಗಳೂರು  ನಿವಾಸಿಗಳಿಗೆ ಅತ್ಯಾಧುನಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಸಬ್ ಅರ್ಬನ್ ರೈಲು ಯೋಜನೆಗಳನ್ನು ಮಾಡುವ ಮೂಲಕ ಬೆಂಗಳೂರಿನ ಸುತ್ತಲಿನ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಮೋದಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿ ಗೆಲುವು ಖಚಿತ ಎಂದರು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಸಾಧಿಸಲಿದೆ. ಅದೇ ರೀತಿ ಎನ್.ಡಿ.ಎ ಮೈತ್ರಿಕೂಟಕ್ಕೆ ರಾಜ್ಯದಲ್ಲಿ ಭರ್ಜರಿ ಗೆಲುವು ಸಿಗಲಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಕಣಕ್ಕಿಳಿದಿದ್ದು, ಈ ಬಾರಿ ಬಹುಮತದೊಂದಿಗೆ ಗೆಲುವು ಖಚಿತ. ರಾಜ್ಯದಲ್ಲಿ ಕಾಂಗ್ರೆಸ್ ವೈಫಲ್ಯದ ವಿರುದ್ಧ ಕಿಡಿಕಾರಿದ ಅವರು, ಎರಡು ಅವಧಿಯಲ್ಲಿ ವಿವಿಧ ಜನೋಪಯೋಗಿ ಕಾರ್ಯಗಳ ಮೂಲಕ ದೇಶದ ಜನರ ವಿಶ್ವಾಸ ಗಳಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ಎಲ್ಲ 28 ಸ್ಥಾನಗಳಲ್ಲೂ ಗೆಲುವು  ಪಡೆಯಲು ನಾವು ಸಂಕಲ್ಪ ಮಾಡಿದ್ದೇವೆ. ಜೆಡಿಎಸ್ ಮೈತ್ರಿಕೂಟದ ಬೆಂಬಲದೊಂದಿಗೆ ಈ ಬಾರಿ ಕರ್ನಾಟಕದಲ್ಲಿಯೂ ಭರ್ಜರಿ ಗೆಲುವು ಸಾಧಿಸಲಿದ್ದೇವೆ ಎಂದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com