Breaking News

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ 31ನೇ ಎಲ್ಯಾರ್‌ಪದವು ಶಾಖೆಯ ಉದ್ಘಾಟನೆ ಮೇ 1ಕ್ಕೆ: ಚಿತ್ತರಂಜನ್ ಬೋಳಾರ್

 

ಮಂಗಳೂರು: ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಖೆ ಹೊಂದಿದ್ದು, ಈಗ ನೂತನ 31 ನೇ ಎಲ್ಯಾರ್‌ಪದವು ಶಾಖೆಯನ್ನು ಮಂಗಳೂರಿನ ಕೊಣಾಜೆಯ ಎಲ್ಯಾರ್‌ಪದವಿನಲ್ಲಿರುವ ಹೋಲಿ ಕ್ರಾಸ್ ಚರ್ಚ್ ಬಳಿಯ ಮೇ 1 ರಂದು ಬೆಳಿಗ್ಗೆ 9.30 ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆ ಮಾಡಲಾಗುತ್ತದೆ ಎಂದು ಅಧ್ಯಕ್ಷ ಚಿತ್ತರಂಜನ್ ಬೋಳಾರ್ ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರು ವಹಿಸಲಿದ್ದಾರೆ. ವಿಧಾನಸಭೆ ಸಭಾಧ್ಯಕ್ಷ ಯು. ಟಿ. ಖಾದರ್ ನೂತನ ಶಾಖೆಯ ಉದ್ಘಾಟನೆ ಮಾಡಲಿದ್ದಾರೆ. ಹೊಲಿ ಕ್ರಾಸ್ ಚರ್ಚ್, ಎಲ್ಯಾರ್‌ಪದವಿನ  ಧರ್ಮಗುರು ಫಾ. ಆರ್. ಜಾನ್ ಡಿಸೋಜ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್ ಕುತ್ತಾರು ಉಪಾಧ್ಯಕ್ಷ ಡಿ. ಮಹಾಬಲ ಹೆಗ್ಡೆ ಮಾಗಣ್ತಡಿ ಅವರು ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ಸಿ.ಎಸ್.ಐ ಬೆತಾನೀಯ ಚರ್ಚ್, ಬೆಳ್ಮ, ಕೊಣಾಜೆ ಇಲ್ಲಿಯ ಧರ್ಮಗುರು ರೆವರೆಂಡ್ ವಿನಯಲಾಲ್ ಬಂಗೇರ ಅವರು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

  1.  

ಕೊಣಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಗೀತಾ ದಾಮೋದರ್ ಅವರು ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ. ಅಂಬ್ಲಮೊಗರು ಗ್ರಾಮ ಪಂಚಾಯಿತಿ ಇಕ್ಬಾಲ್ ಅವರು ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್, ಅವರು ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬ್ರಹ್ಮಶ್ರಿ ನಾರಾಯಣಗುರು ಸೇವಾ ಸಂಘ, ಗ್ರಾಮ ಚಾವಡಿ ಇದರ ಅಧ್ಯಕ್ಷ ರವೀಂದ್ರ ಬಂಗೇರ ಅವರು ಆವರ್ತನ ಠೇವಣಿಗೆ ಚಾಲನೆ ನೀಡಲಿದ್ದಾರೆ. ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ ಎಲ್ಯಾರ್‌ಪದವು ಅಧ್ಯಕ್ಷ ಚಂದ್ರಹಾಸ್ ನಾಯ್ಕ್ ಅವರು ಉಳಿತಾಯ ಖಾತೆಗೆ ಚಾಲನೆ ನೀಡಲಿದ್ದಾರೆ. ಎಲ್ಯಾರ್‌ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಎಡ್‌ಲೈನ್ ಐಮನ್, ಪಜೀರ್ ಗೋಶಾಲೆಯ ಟ್ರಸ್ಟಿಯಾದ ಶಿವಪ್ರಸಾದ್, ನಿವೃತ್ತ ಶಿಕ್ಷಕರಾದ ರವೀಂದ್ರ ರೈ ಕಲ್ಲಿಮಾರು ಹಾಗೂ ಕಟ್ಟಡದ ಮಾಲಕರಾದ ರೆನೋಲ್ಡ್ ಜಿ ಅಮ್ಮಣ್ಣ  ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ ಠೇವಣಿ ಮೇಲೆ ವಿಶೇಷ ಬಡ್ಡಿ ದರವನ್ನು ನೀಡಲಾಗುವುದು. ಇ-ಮುದ್ರಾಂಕ, ಚಿನ್ನಾಭರಣ ಸಾಲ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಭ್ಯವಿದ್ದು, ಸಂಘದಲ್ಲಿ ಈಗಾಗಲೇ ಕೋರ್-ಬ್ಯಾಂಕಿಂಗ್ ಸೌಲಭ್ಯ ಅಳವಡಿಸಲಾಗಿದೆ. ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋ ಟೋಕಿಯ ಜನರಲ್ ಇನ್ಸುರೆನ್ಸ್ ಕಂಪನಿ ವಿಮಾ ಸೌಲಭ್ಯಗಳು ಲಭ್ಯವಿರಲಿದೆ ಎಂದು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com