Breaking News

ಅಶ್ಲೀಲ ವಿಡಿಯೊ ಪ್ರಕರಣ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಅಮಾನತು

 

ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

ಮಂಗಳವಾರ ನಡೆದ ಜೆಡಿಎಸ್‌ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.  ಪಕ್ಷದ ನಿರ್ಧಾರದಂತೆ ಪ್ರಜ್ವಲ್‌ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

  1.  

ಒಂದು ವೇಳೆ ಎಸ್‌ ಐಟಿ ತನಿಖೆಯಲ್ಲಿ ಆರೋಪ ಸಾಬೀತಾದರೆ ಪ್ರಜ್ವಲ್ ಅವರನ್ನು ಪಕ್ಷದಿಂದ‌ ಶಾಶ್ವತವಾಗಿ ಉಚ್ಚಾಟನೆ ಮಾಡಲಾಗುತ್ತದೆ ಎಂದು ಸಭೆ ಬಳಿಕ ಎಚ್ ಡಿಕೆ ತಿಳಿಸಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಕ್ಷದ ಘನತೆ ಮತ್ತು ಗೌರವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ ತತ್ ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಕೆ. ಆರ್. ಶಿವಕುಮಾರ್ ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com